ಮೈದೂಳಲು ಗ್ರಾಮದಲ್ಲಿ ಹಲವರಿಗೆ ವಾಂತಿ, ಭೇದಿ, ಆಸ್ಪತ್ರೆಗೆ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | HOLEHONNUR| 14 ಜೂನ್ 2022

ಮೈದೊಳಲು ಗ್ರಾಮದ ಎರಡು ಬೀದಿಯಲ್ಲಿ ಒಂದೆರಡು ದಿನದಿಂದ ವಾಂತಿ ಭೇದಿ ಪ್ರಕರಣಗಳು ಹೆಚ್ಚಾಗಿದ್ದು ಆತಂಕ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಎಂ.ವಿ.ಅಶೋಕ್ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿತು.

Shimoga Nanjappa hospital

ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಗ್ರಾಮದ ಕುಡಿಯುವ ನೀರಿನ (WATER) ಮೂಲವನ್ನು ಆರೋಗ್ಯಾಧಿಕಾರಿಗಳು ಪರಿಶೀಲಿಸಿದರು. ರಾಜಭಕ್ಷವಾಲಿ ದೇವಸ್ಥಾನದ ಹಿಂಭಾಗದ ಟ್ಯಾಂಕಿನಿಂದ ಸರಬರಾಜು ಆಗುತ್ತಿರುವ ನೀರು ಕುಡಿದ ಜನರ ಆರೋಗ್ಯದಲ್ಲಿ ವ್ಯತ್ಯಾಸ ಆಗಿದೆ. ಟ್ಯಾಂಕಿನ ಬಳಿ ಪರಿಶೀಲಿಸಿದಾಗ ವಾಲ್ಸ್‌ನಲ್ಲಿ ಹಾನಿಗೊಳಗಾಗಿದ್ದು ತ್ಯಾಜ್ಯ ನೀರು ಟ್ಯಾಂಕಿಗೆ ಸೇರಿ ರಬಹುದು ಎಂದು ಶಂಕಿಸಲಾಗಿದೆ.

ಇನ್ನೆರಡು ದಿನ ಟ್ಯಾಂಕ್ ನೀರಿಲ್ಲ

ಇನ್ನೆರಡು ದಿನ ಟ್ಯಾಂಕಿನಿಂದ ನಲ್ಲಿಗಳಿಗೆ ನೀರು ಪೂರೈಸದಂತೆ ತಿಳಿಸಲಾಗಿದೆ. ಅಲ್ಲದೆ ಗ್ರಾಮದ ನೀರಿನ ಮೂಲಗಳ ಕೊಳವೆ ಬಾವಿಗಳ ನೀರು ಸಂಗ್ರಹಿಸಿ ಪರೀಕ್ಷೆಗೆ ಕಳಿಸುವಂತೆ ಗ್ರಾ.ಪಂ. ಪಿಡಿಒಗೆ ಸೂಚಿಸ ಲಾಯಿತು. ರೋಗಿಗಳ ಆರೋಗ್ಯ ಹಾಗೂ ಚಿಕಿತ್ಸೆ ಬಗ್ಗೆ ಆರೋಗ್ಯ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಅಸ್ವಸ್ಥರಾದವರ ಮನೆಗಳಿಗೆ ತೆರಳಿ ಆರೋಗ್ಯ ವಿಚಾರಿಸಿದರು.

ಹೊಟ್ಟೆ ನೋವು, ಭೇದಿಯಿಂದ ಸುಮಾರು 65ಕ್ಕೂ ಹೆಚ್ಚು ಜನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಮಲ್ಲಾಪುರ ಹಾಗೂ ಆನವೇರಿಯ ಖಾಸಗಿ ಕ್ಲಿನಿಕ್‌ಗಳಲ್ಲಿ 250ಕ್ಕೂ ಹೆಚ್ಚು ಜನ ಚಿಕಿತ್ಸೆ ಪಡೆದಿದ್ದಾರೆ. ತೀರಾ ಅಸ್ವಸ್ಥರಾದ 3-4 ಜನ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎರಡು ಕೊಳವೆ ಬಾವಿ ನೀರು

ಕಳೆದ ವಾರ ಗ್ರಾಮದಲ್ಲಿ ಹಬ್ಬ ನಡೆದಿದ್ದು ಗ್ರಾ.ಪಂ. ಎರಡೂ ಕೊಳವೆ ಬಾವಿಗಳ ನೀರನ್ನು ಒಟ್ಟಿಗೆ ಸೇರಿಸಿ ಸರಬರಾಜು ಮಾಡಿದ್ದರಿಂದ ಅನಾರೋಗ್ಯ ಉಂಟಾಗಿದೆ ಎನ್ನಲಾಗಿದೆ. ಗ್ರಾ.ಪಂ. ಆಡಳಿತದ ಅಸಮರ್ಪಕ ನಿರ್ವಹಣೆಯಿಂದ ಅನಾರೋಗ್ಯ ಪ್ರಕರಣಗಳು ಹೆಚ್ಚಾಗಿವೆ ಎಂದು ಗ್ರಾಮಸ್ಥರು ತಾಲೂಕು ವೈದ್ಯಾಧಿಕಾರಿಗಳಿಗೆ ದೂರಿದರು. ಅಲ್ಲದೆ ಪರಿಶೀಲನೆಗೆ ಬಂದ ಗ್ರಾ.ಪಂ. ಸಿಬ್ಬಂದಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ 3 ವರ್ಷದ ಹಿಂದೆ ಕಲುಷಿತ ನೀರು ಸೇವನೆಯಿಂದ ಜನರು ಕಾಲರಾಕ್ಕೆ ತುತ್ತಾಗಿ, ಅನೇಕ ಸಾವು ನೋವುಗಳು ಸಂಭವಿಸಿತ್ತು.

ಇದನ್ನೂ ಓದಿ – ರಸ್ತೆ ಪಕ್ಕ ನಿಂತುಕೊಂಡು ಮಾತಾಡುತ್ತಿದ್ದ ಸ್ನೇಹಿತರಿಗೆ ಬೈಕ್ ಡಿಕ್ಕಿ, ಒಬ್ಬ ಸಾವು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 14, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment