ಶಿವಮೊಗ್ಗ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ನಡೆಯಲಿದೆ. ಈ ಹಿನ್ನೆಲೆ ಭದ್ರಾ ಜಲಾಶಯದಿಂದ (Bhadra Dam) ನೀರು ಹರಿಸಲಾಗುತ್ತಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಭದ್ರಾ ಜಲಾಶಯದಿಂದ ನದಿಗೆ ಜನವರಿ 20 ರಿಂದ ಜನವರಿ 30ರವರೆಗೆ ಪ್ರತಿ ದಿನ 500 ಕ್ಯೂಸೆಕ್‌ನಂತೆ ನೀರು ಹರಿಸಲಾಗುತ್ತದೆ. ಜನವರಿ 31 ರಂದು 300 ಕ್ಯೂಸೆಕ್ ನೀರು ಹರಿಸಲು ನಿರ್ಧರಿಸಲಾಗಿದೆ. ಒಟ್ಟು 0.50 ಟಿ.ಎಂ.ಸಿ ನೀರು ಬಿಡಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮ, ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‌ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ಕೂಡ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಫಲಪುಷ್ಪ ಪ್ರದರ್ಶನದ ದಿನಾಂಕ ಪ್ರಕಟ, ಏನೆಲ್ಲ ವಿಶೇಷತೆ ಇರಲಿದೆ? ಇಲ್ಲಿದೆ ಡಿಟೇಲ್ಸ್
LATEST NEWS
- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

- ಕರ್ನಾಟಕ ಸಂಘದಿಂದ ಪುಸ್ತಕಗಳಿಗೆ ಬಹುಮಾನ, ಕೃತಿಗಳಿಗೆ ಆಹ್ವಾನ, ಇಲ್ಲಿದೆ ಕಂಪ್ಲೀಟ್ ವಿವರ

About The Editor
ನಿತಿನ್ ಆರ್.ಕೈದೊಟ್ಲು





