ಭದ್ರಾ ಜಲಾಶಯ: ಕಾಲುವೆಗಳಿಗೆ ನೀರು ಪೂರೈಕೆ ಮುಂದುವರಿಕೆ

ಶಿವಮೊಗ್ಗ: ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ ಮತ್ತು ಎಡದಂಡೆ ಕಾಲುವೆಗಳಲ್ಲಿ ನೀರು ಹರಿಸುವುದನ್ನು ಮುಂದುವರೆಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಲೆಗಳಿಗೆ ಮೇ 17ರವರೆಗೆ ನೀರು ಹರಿಸುವುದನ್ನು ಮುಂದುವರಿಸಲಾಗುವುದು. ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಅಚ್ಚುಕಟ್ಟು ಭಾಗದ ಎಲ್ಲಾ ರೈತರುಗಳು ಇಲಾಖೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Bhadra-Dam-in-Bhadravathi

Bhadra-Dam-in-Bhadravathi
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion