ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | BHADRAVATHI | 12 ಜುಲೈ 2022
ಸತತ ಮಳೆಯಿಂದಾಗಿ ಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಮುಂಜಾಗೃತಾ ಕ್ರಮವಾಗಿ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ನದಿಗೆ ಬಿಡುವ ಸಂಭವ ಇದೆ. ಆದ್ದರಿಂದ ಜನ, ಜಾನುವಾರು ನದಿ ಪಾತ್ರದಲ್ಲಿ ತಿರುಗಾಡುವುದನ್ನು ನಿಷೇಧಿಸಲಾಗಿದೆ.

ಜು.12 ರಂದು ಜಲಾಶಯದ ನೀರಿನ ಮಟ್ಟ 178.10 ಅಡಿಗಿಂತ ಹೆಚ್ಚಾಗಿದೆ. ಪ್ರಸ್ತುತ ಒಳಹರಿವಿನ ಪ್ರಮಾಣ 30,200 ಕ್ಯೂಸೆಕ್ ಆಗಿದೆ. ಇನ್ನು ಹೆಚ್ಚಿನ ಮಳೆಯಾಗುವ ಸಾದ್ಯತೆ ಇದೆ. ಮಳೆ ಪ್ರಮಾಣದ ಇದೇ ರೀತಿ ಮುಂದುವರೆದಲ್ಲಿ ಭದ್ರಾ ಜಲಾಶಯವು ಗರಿಷ್ಟ ನೀರಿನ ಮಟ್ಟ ತಲುಪುವ ಸಂಭವವಿದೆ.
ಅಣೆಕಟ್ಟು ಸುರಕ್ಷತೆಯ ಹಿತದೃಷ್ಟಿಯಿಂದ ಹಾಗೂ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕಾಗಿ ಮುಂಜಾಗೃತಾ ಕ್ರಮವಾಗಿ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ಕ್ರಸ್ಟ್ ಗೇಟ್ ಮೂಲಕ ಹೊರಗೆ ಬಿಡಲಾಗುತ್ತದೆ. ಆದ್ದರಿಂದ ಭದ್ರಾ ನದಿಯ ಎಡ ಮತ್ತು ಬಲದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಸೂಪರಿಂಟೆಂಡೆಂಟ್ ಇಂಜಿನಿಯರ್ ಜಿ.ಎಸ್.ಪಟೇಲ್ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮುಂದುವರೆದ ಮಳೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















