ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 26 APRIL 2023
BHADRAVATHI : ಹಾವೇರಿ ಜಿಲ್ಲೆ ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ (Bhadra Dam) ತುಂಗಾ-ಭದ್ರಾ ನದಿಗೆ 1 ಟಿ.ಎಂ.ಸಿ. ನೀರನ್ನು ಹರಿಸಲು ಆದೇಶಿಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪ್ರಾದೇಶಿಕ ಆಯುಕ್ತರ ಅದೇಶದನ್ವಯ ಏ.27 ರ ಸಂಜೆ 6 ರಿಂದ ಮೇ 9ರ ಬೆಳಗ್ಗೆ 6 ರವರೆಗೆ ಪ್ರತಿ ದಿನ 1 ಸಾವಿರ ಕ್ಯೂಸೆಕ್‌ನಂತೆ ಒಟ್ಟು 11,574 ಕ್ಯೂಸೆಕ್ ನೀರನ್ನು ಭದ್ರಾ ನದಿಗೆ (Bhadra Dam) ಹರಿಸಲಾಗುವುದು.
ಇದನ್ನೂ ಓದಿ – ಆಲ್ಕೊಳ ಸರ್ಕಲ್ ಬಳಿ ಬೈಕಿಗೆ ಟ್ಯಾಂಕರ್ ಲಾರಿ ಡಿಕ್ಕಿ, ಮಹಾವೀರ ವೃತ್ತದಲ್ಲಿ ಆಟೋಗೆ ಗುದ್ದಿದ ಕಾರು
ಈ ಅವಧಿಯಲ್ಲಿ ನದಿ ಪಾತ್ರದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು, ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಇತ್ಯಾದಿಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‌ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಕರ್ನಾಟಕ ನೀರಾವರಿ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.