ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 FEBRUARY 2024
SHIMOGA : ಫೆ.5 ರಿಂದ ಫೆ.10ರವರೆಗೆ ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಷ್ಟು ನೀರು ಹರಿಸಲಾಗುತ್ತದೆ?
ಫೆ.5ರ ರಾತ್ರಿ 10 ಗಂಟೆಯಿಂದ ಫೆ.10ರ ರಾತ್ರಿ 10 ಗಂಟೆವರೆಗೆ ಪ್ರತಿ ದಿನ 2 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತದೆ. ಒಟ್ಟು 12 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ನೀರು ಹರಿಸಲು ಕಾರಣವೇನು?
ಕಾರಣ 1 : 2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ಹಾವೇರಿ, ಗದಗ ಮತ್ತು ವಿಜಯನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಗದಗ, ಬೆಟಗೇರಿ, ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ, ಕೂಡ್ಲಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಬಹುಗ್ರಾಮ ನದಿ ನೀರು ಯೋಜನೆಯಡಿ ಕುಡಿಯುವ ನೀರು ಒದಗಿಸಲು.
ಕಾರಣ 2 : ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ನೀರು ಹರಿಸಲಾಗುತ್ತಿದೆ.
ಜನರಿಗೆ ನಿಗಮದ ಎಚ್ಚರಿಕೆ
ನೀರು ಹರಿಸುವುದರಿಂದ ನದಿ ಪಾತ್ರದಲ್ಲಿ ಸಾರ್ವಜನಿಕರು, ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ನಿಷೇಧಿಸಲಾಗಿದೆ. ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ಹೊಸ ಡಿಸಿ ಅಧಿಕಾರ ಸ್ವೀಕಾರ, ಮೊದಲ ದಿನವೇ ವಿವಿಧ ವಿಭಾಗಕ್ಕೆ ದಿಢೀರ್ ಭೇಟಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422