ಶಿವಮೊಗ್ಗ: ಅಚ್ಚುಕಟ್ಟು ವ್ಯಾಪ್ತಿಯ ಬೆಳೆ ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿದೆ. ಆದ್ದರಿಂದ ರೈತರ ಬೇಡಿಕೆಯಂತೆ ಭದ್ರಾ ಜಲಾಶಯದ (dam) ಎಡದಂಡೆ ನಾಲೆಯಲ್ಲಿ ಮೇ 10 ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ಮೇ 18 ರವರೆಗೆ ನೀರು ಹರಿಸುವುದನ್ನು ಮುಂದುವರೆಸಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದೆ. ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ರೈತರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ.
2024-25ನೇ ಸಾಲಿನ ಬೇಸಿಗೆ ಬೆಳೆಗಳಿಗೆ ನಿಗದಿತ ವಿತರಣಾ ನಾಲೆಗಳಲ್ಲಿ ಕಾರ್ಯಪಾಲಕ ಇಂಜಿನಿಯರ್‌ಗಳು ನಿರ್ಧರಿಸಿರುವ ಆಂತರಿಕ ಸರದಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಆರ್. ರವಿಚಂದ್ರ ಹಾಗೂ ಭದ್ರಾ ಯೋಜನಾ ವೃತ್ತ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಬೆಳ್ಳಂಬೆಳಗ್ಗೆ ಮನೆ ಬಳಿ ದಿಢೀರ್ ಪ್ರತ್ಯಕ್ಷವಾದ ಅಪರಿಚಿತರು, ದೇವರ ಹೆಸರಿನಲ್ಲಿ ವಂಚಿಸಿದರು, ಏನಿದು ಕೇಸ್?


LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





