ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 26 DECEMBER 2023
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ಭದ್ರಾ ಮೇಲ್ದಂಡೆ ಕಾಲುವೆಗೆ ಡಿ.29ರಿಂದ ನೀರು ಹರಿಸಲಾಗುತ್ತದೆ. ಈ ಹಿನ್ನೆಲೆ ಕಾಲುವೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಎಚ್ಚರ ವಹಿಸುವಂತೆ ವಿಶ್ವೇಶ್ವರಯ್ಯ ಜಲ ನಿಗಮದ ಸೂಪರಿಂಟೆಂಡೆಂಟ್ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯು ಭದ್ರಾ ಜಲಾಶಯದಿಂದ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕೆರೆ ಕಸಬಾ, ಅಮೃತಾಪುರ ಅಜ್ಜಂಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಾದು ಹೋಗಿದೆ. ಸರ್ಕಾರದ ನಿರ್ದೇಶನದಂತೆ ಡಿ.29 ರಂದು ಶಾಂತಿಪುರ ಪಂಪ್ಹೌಸ್-1, ಜಂಭದಹಳ್ಳ ಅಕ್ಬೆಡಕ್ಸ್ ತರೀಕೆರೆ ರೈಲು ಸೇತುವೆ ಬೆಟ್ಟತಾವರೆಕೆರೆ ಪಂಪ್ಹೌಸ್-2, ಅಜ್ಜಂಪುರ ಸುರಂಗದ ಮೂಲಕ ಹೆಬ್ಬೂರು ಗ್ರಾಮದ ಹತ್ತಿರದ ವೈ-ಜಂಕ್ಷನ್ ಮುಖಾಂತರ ನೀರು ಹರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ವ್ಯಾಪ್ತಿಯಲ್ಲಿ ಜನರು ಕಾಲುವೆ ಹಾಗೂ ಹಳ್ಳದ ಪಾತ್ರಗಳಲ್ಲಿ ತಿರುಗಾಡುವುದು, ಜಾನುವಾರುಗಳನ್ನು ಕಾಲುವೆ ಒಳಗಡೆ ಬಿಡುವುದು, ಅನಧಿಕೃತವಾಗಿ ಪಂಪ್ಸೆಟ್ಗಳನ್ನು ಅಳವಡಿಸಿ ನೀರು ಮೇಲೆತ್ತುವುದು ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಎಚ್ಚರಿಸಲಾಗಿದೆ.
ಇದನ್ನೂ ಓದಿ – ಗ್ರಾಮಸ್ಥರ ಜೊತೆ ಸಂಸದ ರಾಘವೇಂದ್ರ ಪ್ರತಿಭಟನೆ, ‘ನಿಮ್ಮ ಹೆಂಡತಿ, ಮಕ್ಕಳಿಗೆ ಒಳ್ಳೆಯದಾಗಲ್ಲ’ ಅಂತಾ ಎಚ್ಚರಿಕೆ