ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 JULY 2024
DAM NEWS : ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಭದ್ರಾ ಜಲಾಶಯದಿಂದ ಸಾವಿರಾರು ಕ್ಯೂಸೆಕ್ ನೀರು (water) ಪೋಲಾಗುತ್ತಿದೆ. ಸ್ಲೂಯಿಸ್ ಗೇಟ್ ನಿರ್ವಹಣೆ ವೇಳೆ ತಾಂತ್ರಿಕ ದೋಷ ಉಂಟಾಗಿ ಗೇಟ್ ಬಂದ್ ಆಗದೆ ಇರುವುದರಿಂದ ನೀರು ಹೊಳೆಗೆ ಹರಿದು ಹೋಗುತ್ತಿದೆ. ಇದು ರೈತರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ನದಿಗೆ ನೀರು ಹರಿಸಲು ಎರಡು ಸ್ಲೂಯಿಸ್ ಗೇಟ್ ಅಥವಾ ರಿವರ್ ಗೇಟ್ ನಿರ್ಮಿಸಲಾಗಿದೆ. ಈ ಪೈಕಿ ಒಂದು ಗೇಟ್ನಿಂದ ಅನಾಯಸವಾಗಿ ನೀರು ಹೊಳೆಗೆ ಹರಿದು ಹೋಗುತ್ತಿದೆ. ಮಳೆಗಾಲಕ್ಕೂ ಮೊದಲು ಭದ್ರಾ ಜಲಾಶಯದ ನಿರ್ವಹಣೆ ಮಾಡಬೇಕು. ಆದರೆ ಮಳೆಗಾಲದ ಹೊತ್ತಿಗೆ ನಿರ್ವಹಣೆ ಮಾಡಲು ಮುಂದಾಗಿದ್ದರು ಎಂಬ ಆರೋಪವಿದೆ. ಈ ಸಂದರ್ಭ ರಿವರ್ ಗೇಟ್ಗಳ ಪೈಕಿ ಒಂದು ಗೇಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿ ನೀರು ಹರಿದು ಹೋಗುತ್ತಿದೆ.

ಮಳೆಗಾಲದಲ್ಲಿ ಜಲಾಶಯದಲ್ಲಿ ನೀರು ಸಂಗ್ರಹವಾಗಬೇಕು. ಇದು ಬೇಸಿಗೆ ಹೊತ್ತಿಗೆ ಅಚ್ಚುಕಟ್ಟು ಭಾಗದ ರೈತರಿಗೆ ಅನುಕೂಲ ಆಗಲಿದೆ. ಆದರೆ ಮಳೆಗಾಲದಲ್ಲಿಯೇ ನೀರು ಹರಿದು ಹೋದರೆ, ಜಲಾಶಯದಲ್ಲಿ ನೀರು ಸಂಗ್ರಹವಾಗದೆ ಮುಂದೆ ಸಮಸ್ಯೆ ಉಂಟಾಗಲಿದೆ ಎಂಬ ಆತಂಕ ರೈತರನ್ನು ಕಾಡುತ್ತಿದೆ.
ಇದನ್ನೂ ಓದಿ – ಮೈದುಂಬಿದ ತುಂಗೆ, ಜಲಾಶಯದ ಒಳ ಹರಿವು ಕುಸಿತ, ಹೊರ ಹರವು ಇಳಿಕೆ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





