ಭದ್ರಾವತಿ: ತಾಲ್ಲೂಕಿನ ತೋಟಗಾರಿಕೆ ಇಲಾಖೆಯು 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಣಿಗೆ ಅವಕಾಶ ಕಲ್ಪಿಸಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಫಸಲು ನೀಡುತ್ತಿರುವ ಅಡಿಕೆ, ಮಾವು, ಕಾಳುಮೆಣಸು ಮತ್ತು ನಾಟಿ ಮಾಡಿರುವ ಶುಂಠಿ ಬೆಳೆಗಳಿಗೆ ರೈತರು ವಿಮೆ ಮಾಡಿಸಬಹುದಾಗಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ರೈತ ಸಂಪರ್ಕ ಕೇಂದ್ರ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಆಧಾರ್ ಕಾರ್ಡ್ ಹಾಗೂ ಸ್ವಯಂ ಘೋಷಿತ ಬೆಳೆ ವಿವರಗಳನ್ನು ಲಗತ್ತಿಸಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಅಥವಾ ಬ್ಯಾಂಕುಗಳಲ್ಲಿ ಜುಲೈ 31ರ ಒಳಗೆ ವಿಮೆ ಕಂತು ಪಾವತಿಸಬೇಕಾಗಿದೆ.

ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳ ಮೊಬೈಲ್ ಸಂಖ್ಯೆಗಳಾದ ಕಸಬಾ-1: 9591134415, ಕಸಬಾ-2: 8317333375, ಕೂಡ್ಲಿಗೆರೆ: 7975537143, ಹೊಳೆಹೊನ್ನೂರು-1: 8317404476, ಹೊಳೆಹೊನ್ನೂರು-2: 9591134415 ಹಾಗೂ ಹೊಳೆಹೊನ್ನೂರು-3: 8317404476 ಸಂಪರ್ಕಿಸಬಹುದಾಗಿದೆ.