ಕ್ರೇನ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆ 6 ತಿಂಗಳ ಬಳಿಕ ಸಾವು, ಚಾಲಕನ ವಿರುದ್ಧ ಕೇಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 1 ಜುಲೈ 2022

ಕ್ರೇನ್ ಡಿಕ್ಕಿ (CRANE ACCIDENT) ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಆರು ತಿಂಗಳ ಬಳಿಕ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರೇನ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಭದ್ರಾವತಿ ಹನುಮಂತನಗರದ ಭಾಗ್ಯಮ್ಮ (45) ಮೃತ ದುರ್ದೈವಿ. 2021ರ ಡಿಸೆಂಬರ್ 20ರಂದು ಭದ್ರಾವತಿಯ ಭದ್ರಾ ಸಿಟಿ ಕ್ಲಬ್ ಬಳಿ ನಡೆದುಕೊಂಡು ಬರುವಾಗ ಕ್ರೇನ್ ಡಿಕ್ಕಿ ಹೊಡೆದಿತ್ತು.

ಆರು ತಿಂಗಳು ನರಳಾಡಿದ್ದರು

ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಜೇಡಿಕಟ್ಟೆಯಿಂದ ಭದ್ರಾವತಿ ಕಡೆಗೆ ಭಾಗ್ಯಮ್ಮ ಅವರು ನಡೆದುಕೊಂಡು ಹೋಗುತ್ತಿದ್ದರು. ಭದ್ರಾ ಸಿಟಿ ಕ್ಲಬ್ ಬಳಿ ವೇಗವಾಗಿ ಬಂದ ಕ್ರೇನ್ ಒಂದು ಹಿಂಬದಿಯಿಂದ ಡಿಕ್ಕಿ ಹೊಡೆದಿತ್ತು.

ಘಟನೆಯಲ್ಲಿ ಭಾಗ್ಯಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಭದ್ರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಲಾಯಿತು.

ಜನವರಿ 4ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬಂದಿದ್ದ ಭಾಗ್ಯಮ್ಮ ಅವರಿಗೆ ಮನೆಯಲ್ಲೆ ಚಿಕಿತ್ಸೆ ಮುಂದುವರೆಸಲಾಗಿತ್ತು. ಜೂನ್ 29ರಂದು ತೀವ್ರ ಅನಾರೋಗ್ಯ ಉಂಟಾಗಿದ್ದರಿಂದ ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಭಾಗ್ಯಮ್ಮ ಅವರು ಮೃತಪಟ್ಟಿದ್ದಾರೆ.

ಕ್ರೇನ್ ಚಾಲಕನ ವಿರುದ್ಧ ಕೇಸ್

ಅಜಾಗರೂಕತೆಯಿಂದ ಕ್ರೇನ್ ಚಾಲನೆ ಮಾಡಿದ ಚಾಲಕ ಸುದರ್ಶನ್ ವಿರುದ್ಧ ಭದ್ರಾವತಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಪಘಾತದ ಗಾಯದಿಂದ ಚೇತರಿಸಿಕೊಳ್ಳದೆ ಭಾಗ್ಯಮ್ಮ ಅವರು ಮೃತಪಟ್ಟಿದ್ದಾರೆ. ಹಾಗಾಗಿ ಚಾಲಕ ಸುದರ್ಶನ್ ವಿರುದ್ಧದ ಪ್ರಕರಣಕ್ಕೆ ಹೆಚ್ಚುವರಿಯಾಗಿ ಸೆಕ್ಷನ್ 304 (ಎ) ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ – ಲಾಂಚ್ ಸೇವೆ ಪುನಾರಂಭ, ಸಿಗಂದೂರು, ಕೊಲ್ಲೂರು ಪ್ರವಾಸಿಗರ ನಿಟ್ಟುಸಿರು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment