VISL ಖಾಸಗೀಕರಣ ವಿರೋಧಿಸಿ ಮಳೆಯನ್ನು ಲೆಕ್ಕಿಸದೆ ಕಾರ್ಮಿಕರ ಹೋರಾಟ, ಸಂಸದ ರಾಘವೇಂದ್ರ ರಾಜೀನಾಮೆಗೆ ಆಗ್ರಹ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 05 ಜುಲೈ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ವಿಐಎಸ್ಎಲ್ ಕಾರ್ಖಾನೆ ಮಾರಾಟಕ್ಕೆ ಉಕ್ಕು ಪ್ರಾಧಿಕಾರ ಟೆಂಡರ್ ಕರೆದಿರುವುದನ್ನು ವಿರೋಧಿಸಿ, ಕಾರ್ಮಿಕರು ಇವತ್ತು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ನಡೆ ವಿರುದ್ಧ ತೀವ್ರ ಅಕ್ರೋಶ ವ್ಯಕ್ತಪಡಿಸಿದ ಕಾರ್ಮಿಕರು, ಮಾಜಿ ಸಿಎಂ ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರ ಮನೆ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ವಿಐಎಸ್ಎಲ್ ಕಾರ್ಖಾನೆ ಮುಂದೆ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಾರ್ಮಿಕ ಸಂಘದ ಅಧ್ಯಕ್ಷ ಜೆ.ಜಗದೀಶ್, ವಿಐಎಸ್ಎಲ್ ಕಾರ್ಖಾನೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬಂಡವಾಳ ತೊಡಗಿಸಲಿದೆ ಎಂಬ ಆಶಾಭಾವನೆಯಿಂದ ಜನರು ಬಿ.ವೈ.ರಾಘವೇಂದ್ರ ಅವರಿಗೆ ಮತ ನೀಡಿದ್ದರು. ಆದರೆ ಈಗ ಖಾಸಗೀಕರಣಕ್ಕೆ ಟೆಂಡರ್ ಕರೆಯುವ ಮೂಲಕ ಕಾರ್ಮಿಕರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

ಸುರಿಯುವ ಮಳೆ ನಡುವೆಯೇ ಪ್ರತಿಭಟನೆ

ವಿಐಎಸ್ಎಲ್ ಕಾರ್ಖಾನೆ ಖಾಸಗೀಕರಣಕ್ಕೆ ಟೆಂಡರ್ ಕರೆದ ಹಿನ್ನೆಲೆ, ಕಾರ್ಮಿಕರು ಸಂಸದ ಬಿ.ವೈ.ರಾಘವೇಂದ್ರ ರಾಜೀನಾಮಗೆ ಆಗ್ರಹಿಸಿದ್ದಾರೆ. ಮತ್ತೊಂದೆಡೆ, ಮಾಜಿ ಸಿಎಂ ಯಡಿಯುರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಮನೆ ಮುಂದೆ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಜುಲೈ 7ರಂದು ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನು, ವಿಐಎಸ್ಎಲ್ ಕಾರ್ಖಾನೆ ಖಾಸಗೀಕರಣ ವಿರೋಧಿಸಿ ಕಾರ್ಮಿರು ಬೆಳಗ್ಗೆ 6 ಗಂಟೆಯಿಂದಲೇ ಪ್ರತಿಭಟನೆ ಆರಂಭಿಸಿದ್ದಾರೆ. ಜೋರಾಗಿ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಸದೆ, ಪ್ರತಿಭಟನೆ ನಡೆಸಿದರು.

ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷ ಜೆ.ಎನ್.ಚಂದ್ರಹಾಸ್, ಪ್ರಮುಖರಾದ ಬಸಂತಕುಮಾರ್, ಅಮೃತಕುಮಾರ್, ಮೋಹನ್, ಚಂದ್ರೇಗೌಡ, ಧರ್ಮಪ್ರಸಾದ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment