ಹೊಳೆಹೊನ್ನೂರು ಬಳಿ ಯುವಕನನ್ನು ಬಲಿ ಪಡೆದ ಡೆಂಘೆ ಜ್ವರ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 05 ಅಕ್ಟೋಬರ್ 2021

ಡೆಂಘೆ ಜ್ವರದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಭದ್ರಾವತಿ ತಾಲೂಕು ಗುಡುಮಗಟ್ಟೆಯಲ್ಲಿ ಘಟನೆ ಸಂಭವಿಸಿದೆ.

ಗ್ರಾಮದ ಜಿ.ಜೆ.ಪರಮೇಶ್ (28) ಡೆಂಘೆಗೆ ಬಲಿಯಾಗಿದ್ದಾರೆ. ಕಳೆದೊಂದು ವಾರದಿಂದ ಪರಮೇಶ್ ಜ್ವರದಿಂದ ಬಳಲುತ್ತಿದ್ದರು. ಹಾಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಪರಮೇಶ್ ಮೃತರಾಗಿದ್ದಾರೆ.

ಕಾಂಗ್ರೆಸ್ ಮುಖಂಡ ಜೋತ್ರದಾರ್ ಜಯಪ್ಪ ಜಯಪ್ಪ ಅವರ ಮಗ ಪರಮೇಶ್ ಎರಡು ವರ್ಷದ ಹಿಂದೆ ವಿವಾಹವಾಗಿದ್ದರು. ಒಂದು ವರ್ಷದ ಹೆಣ್ಣು ಮಗುವಿದೆ.

ADVT JULY NANJAPPA HOSPITAL HOME LAB TESTING

ಪರಮೇಶ್ ಮೃತಪಟ್ಟ ಮಾಹಿತಿ ತಿಳಿಯುತ್ತಿದ್ದಂತೆ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್, ಎಪಿಎಂಸಿ ಸದಸ್ಯ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತು, ಡಾ.ಶ್ರೀನಿವಾಸ್ ಕರಿಯಣ್ಣ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದರು.

1632381449326627 1

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

Leave a Comment