

ಭದ್ರಾವತಿ: ಕ್ರಿಕೆಟ್ (Cricket) ವಿಚಾರವಾಗಿ ಸ್ನೇಹಿತರ ಮಧ್ಯೆ ಜಗಳವಾಗಿ ಒಬ್ಬಾತನನ್ನು ಹತ್ಯೆ ಮಾಡಲಾಗಿದೆ. ಮತ್ತೋರ್ವನಿಗೆ ಗಾಯವಾಗಿದೆ. ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಭದ್ರಾವತಿ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಅರುಣ್ (23) ಕೊಲೆಯಾಗಿದ್ದಾನೆ. ಸಂಜಯ್ ಎಂಬಾತ ಗಾಯಗೊಂಡಿದ್ದಾನೆ.
ಕ್ರಿಕೆಟ್ ವಿಚಾರಕ್ಕೆ ಕಿರಿಕ್
ಸೋಮವಾರ ಸಂಜೆ ಕ್ರಿಕೆಟ್ ಆಡಿದ್ದರು. ರಾತ್ರಿ ಮದ್ಯ ಸೇವಿಸುವಾಗ ಇದೇ ವಿಚಾರವಾಗಿ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ಸಂದರ್ಭ ಹತ್ಯೆಯಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದ ವಿವಿಧ ಠಾಣೆ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?
ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಪಾನಮತ್ತರಾಗಿರುವ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






