ರಾತ್ರಿ ಯುವಕನ ಕೊಲೆ, ಮತ್ತೊಬ್ಬನಿಗೆ ಗಾಯ, ಇಬ್ಬರು ವಶಕ್ಕೆ, ಘಟನೆ ಕಾರಣವಾಯ್ತ ಕ್ರಿಕೆಟ್‌?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
The-Team-PU-College-scaled
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಭದ್ರಾವತಿ: ಕ್ರಿಕೆಟ್‌ (Cricket) ವಿಚಾರವಾಗಿ ಸ್ನೇಹಿತರ ಮಧ್ಯೆ ಜಗಳವಾಗಿ ಒಬ್ಬಾತನನ್ನು ಹತ್ಯೆ ಮಾಡಲಾಗಿದೆ. ಮತ್ತೋರ್ವನಿಗೆ ಗಾಯವಾಗಿದೆ. ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಭದ್ರಾವತಿ ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಅರುಣ್‌ (23) ಕೊಲೆಯಾಗಿದ್ದಾನೆ. ಸಂಜಯ್‌ ಎಂಬಾತ ಗಾಯಗೊಂಡಿದ್ದಾನೆ.

ಕ್ರಿಕೆಟ್‌ ವಿಚಾರಕ್ಕೆ ಕಿರಿಕ್‌

ಸೋಮವಾರ ಸಂಜೆ ಕ್ರಿಕೆಟ್‌ ಆಡಿದ್ದರು. ರಾತ್ರಿ ಮದ್ಯ ಸೇವಿಸುವಾಗ ಇದೇ ವಿಚಾರವಾಗಿ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ಸಂದರ್ಭ ಹತ್ಯೆಯಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದ ವಿವಿಧ ಠಾಣೆ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಪಾನಮತ್ತರಾಗಿರುವ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Arya-PU-College-Shimoga.

Leave a Comment