ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 6 JANUARY 2025
ಹೊಳೆಹೊನ್ನೂರು : ಪಂಪ್ಸೆಟ್ ಸ್ವಿಚ್ ಆಫ್ ಮಾಡಲು ತೆರಳಿದ್ದಾಗ ವಿದ್ಯುತ್ ಪ್ರವಹಿಸಿ (Electricity) ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಕನಸಿನಕಟ್ಟೆ ಗ್ರಾಮದ ದರ್ಶನ್ (20) ಮೃತ ಯುವಕ. ಭಾನುವಾರ ಸಂಜೆ ತಮ್ಮ ಜಮೀನಿನಲ್ಲಿ ಘಟನೆ ಸಂಭವಿಸಿದೆ.
ನೀರು ಹಾಯಿಸಲು ದರ್ಶನ್ ತಮ್ಮ ತೋಟಕ್ಕೆ ತೆರಳಿದ್ದರು. ಈ ಸಂದರ್ಭ ಪಂಪ್ಸೆಟ್ನ ಸ್ವಿಚ್ ಆಫ್ ಮಾಡುವಾಗ ವಿದ್ಯುತ್ ಶಾಕ್ ತಗುಲಿದೆ ಎಂದು ಹೇಳಲಾಗುತ್ತಿದೆ. ನೆರೆಹೊರೆ ಜಮೀನಿನವರು ಇದನ್ನು ಗಮನಿಸಿ ಕುಟುಂಬದವರಿಗೆ ವಿಷಯ ತಿಳಿಸಿದ್ದಾರೆ. ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ರಾತ್ರಿ ನಡೆದು ಹೋಗುತ್ತಿದ್ದ ಮಹಿಳೆಗೆ ಕಾದಿತ್ತು ಆಘಾತ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422