ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ : ಬೈಕ್ನಲ್ಲಿ (Bike) ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಮನಸೋಯಿಚ್ಛೆ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ಸೀಗೆಬಾಗಿಯ ಪೆಟ್ರೋಲ್ ಬಂಕ್ ಸಮೀಪ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ.
ಭದ್ರಾ ಕಾಲೋನಿಯ ಪ್ರಸನ್ನ ಕುಮಾರ್ ಕೆಲಸಕ್ಕೆಂದು ಬೈಕ್ನಲ್ಲಿ ತೆರಳುತ್ತಿದ್ದರು. ಈ ಸಂದರ್ಭ ಇಬ್ಬರು ಯುವಕರು ಪ್ರಸನ್ನ ಕುಮಾರ್ನ ಬೈಕ್ ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿದ್ದಾರೆ. ಅಲ್ಲದೆ ಹಲ್ಲೆ ನಡೆಸಿದ್ದಾರೆ. ಕಲ್ಲಿನಿಂದ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಕೂಡಲೆ ಸ್ಥಳೀಯರು ಜಗಳ ಬಿಡಿಸಿದ್ದು, ಪ್ರಸನ್ನ ಕುಮಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಹಣಗೆರೆಕಟ್ಟೆ ಸಮೀಪ ರಸ್ತೆಗೆ ಬಿದ್ದ ಮರ, ವಿದ್ಯುತ್ ಕಂಬಗಳು, ಟ್ರಾಫಿಕ್ ಜಾಮ್

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






