ಶಿವಮೊಗ್ಗ ಲೈವ್.ಕಾಂ | SHIMOGA | 09 ಡಿಸೆಂಬರ್ 2019
ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿಗೆ ಗೆಲುವು ಸಾಧಿಸಿದ ಹಿನ್ನೆಲೆ, ಜಿಲ್ಲೆಯಾದ್ಯಂತ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿಪಟ್ಟರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಭದ್ರಾವತಿಯಲ್ಲಿ ಸಂಭ್ರಮ ಜೋರು
ರಂಗಪ್ಪ ಸರ್ಕಲ್’ನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಿಸಿದರು. ಸಿಎಂ ಯಡಿಯೂರಪ್ಪ ಮತ್ತು ಪಕ್ಷದ ಚಿಹ್ನೆಗೆ ಹಾರ ಹಾಕಿದರು. ತಾಲೂಕು ಅಧ್ಯಕ್ಷ ಪ್ರಭಾಕರ್, ಪ್ರಮುಖರಾದ ಕದಿರೇಶ್, ರಾಮಚಂದ್ರ, ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ಬಿ.ಕೆ.ಶ್ರೀನಾಥ್, ಶೋಭಾ, ಅನ್ನಪೂರ್ಣ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಸೊರಬದಲ್ಲೂ ಪಟಾಕಿ, ಸಿಹಿ
ತಾಲೂಕು ಬಿಜೆಪಿ ಕಚೇರಿ ಮುಂದೆ ಶಾಸಕ ಕುಮಾರ್ ಬಂಗಾರಪ್ಪ ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಬಿಜೆಪಿಗೆ ಇದು ಮಹತ್ವದ ಚುನಾವಣೆಯಾಗಿತ್ತು. ಜನರು ಹೆಚ್ಚು ಮತದಾನ ಮಾಡಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಪಕ್ಷದ ಕಾರ್ಯಕರ್ತರು ಒಗ್ಗಟಿನಿಂದ ಎದುರಿಸಬೇಕು ಎಂದು ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು.
ಪಕ್ಷದ ರಾಷ್ಟ್ರೀಯ ಪರಿಷತ್ ಸದಸ್ಯ ಪಾಣಿ ರಾಜಪ್ಪ, ಮುಖಂಡರಾದ ಗೀತಾ ಮಲ್ಲಿಕಾರ್ಜುನ್, ನಿರಂಜನ ಕುಪ್ಪಗಡ್ಡೆ, ದಿವಾಕರ್ ಭಾವೆ, ಗಜಾನನ ರಾವ್ ಉಳವಿ, ಭೋಗೇಶ್ ಶಿಗ್ಗಾ, ಗೌರಮ್ಮ ಭಂಡಾರಿ ಸೇರಿ ಹಲವರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಸಿಎಂ ಮನೆ ಮುಂದೆ ಸಂಭ್ರಮಾಚರಣೆ
ಶಿಕಾರಿಪುರದ ಮಾಳೇರ ಕೇರಿಯಲ್ಲಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದ ಮುಂದೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿದರು. ಬಳಿ ಪ್ರಮುಖ ಬೀದಿಗಳಲ್ಲಿ ಯಡಿಯೂರಪ್ಪ ಪರ ಘೋಷಣೆ ಕೂಗುತ್ತ ಮೆರವಣಿಗೆ ಮಾಡಿದರು. ನಂತರ ಬಸ್ ನಿಲ್ದಾಣದ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಂ.ಬಿ.ಚನ್ನವೀರಪ್ಪ, ಪ್ರಮುಖರಾದ ಹಾಲಪ್ಪ, ವಸಂತಗೌಡ, ದೇವೇಂದ್ರಪ್ಪ ಬೆಣ್ಣೆ, ಹಳ್ಳೂರು ಪರಮೇಶ್ವರಪ್ಪ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

ಸಾಗರದಲ್ಲೂ ಬಿಜೆಪಿ ಸಂಭ್ರಮ
ಉಪ ಚುನಾವಣೆ ಗೆಲುವು ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಕಾರ್ಗಲ್’ನಲ್ಲಿ ಸಂಭ್ರಮಾಚರಣೆ ಮಾಡಿದರು. ಯು.ಎಂ.ಸತ್ಯನಾರಾಯಣ, ಕೆ.ಕೆ.ಜಾನ್, ಜೋಗ್ ಕಾರ್ಗಲ್ ಪ.ಪಂ ಸದಸ್ಯರು, ಸೇರಿದಂತೆ ಹಲವರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
BJP workers celebrate in various taluks of Shimoga over the victory in By Election. Shivamogga Live, Number 1 news website of Shimoga