BREAKING NEWS | ಹೊಸನಗರದಲ್ಲಿ ಎಸಿಬಿ ದಾಳಿ, ಲಂಚದ ಹಣದ ಜೊತೆಗೆ ಸಿಕ್ಕಿಬಿದ್ದ ಅಧಿಕಾರಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 30 ಮಾರ್ಚ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಲಂಚದ ಹಣ ಸ್ವೀಕರಿಸುತ್ತಿದ್ದ ಗ್ರೇಡ್ 1 ಹೆಚ್ಚುವರಿ ಪ್ರಭಾರ ಪಿಡಿಓ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು  ದಾಳಿ ನಡಸಿ, ಬಂಧಿಸಿದ್ದಾರೆ.

ಹೊಸನಗರ ತಾಲೂಕು ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಗ್ರೇಡ್ 1 ಹೆಚ್ಚುವರಿ ಪ್ರಭಾರ ಪಿಡಿಓ ಮುರುಗೇಶ್ ಎಸಿಬಿ ಬಲಿಗೆ ಬಿದ್ದ ಅಧಿಕಾರಿ.

ಒಂದು ಲಕ್ಷ ಲಂಚಕ್ಕೆ ಬೇಡಿಕೆ

ಸ್ಥಳೀಯರೊಬ್ಬರಿಗೆ ಭೂ ಪರಿವರ್ತನೆಗೊಂಡ 10 ಗುಂಟೆ ಜಾಗದ ನಿವೇಶನಗಳಿಗೆ ಪ್ಲಾನಿಂಗ್ ಅಪ್ರೂವಲ್ ಮತ್ತು ಮ್ಯೂಟೇಶನ್ ಮಾಡಿಕೊಡಲು ಮುರುಗೇಶ್ ಒಂದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಮೊದಲ ಕಂತಿನಲ್ಲಿ 20 ಸಾವಿರ ರೂ. ಲಂಚದ ಹಣವನ್ನು ಸ್ವೀಕರಿಸಿದ್ದ.

ಇವತ್ತು ಮಧ್ಯಾಹ್ನ ಎರಡನೇ ಕಂತಿನ ಲಂಚದ ಹಣ 30 ಸಾವಿರ ರೂ. ಪಡೆಯುತ್ತಿದ್ದ ವೇಳೆ ಶಿವಮೊಗ್ಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಂಚದ ಹಣದ ಸಹಿತ ಮುರೇಶ್ ಸಿಕ್ಕಿಬಿದ್ದಿದ್ದಾನೆ. ಆತನನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.

ಪೂರ್ವ ವಲಯ ಪೊಲೀಸ್ ಅಧೀಕ್ಷಕ ಜಯಪ್ರಕಾಶ್ ಮಾರ್ಗದರ್ಶನದಲ್ಲಿ, ಶಿವಮೊಗ್ಗ ಭ್ರಷ್ಟಾಚಾರ ನಿಗ್ರಹ ದಳ ಡಿವೈಎಸ್’ಪಿ ಜೆ.ಲೋಕೇಶ್ ನೇತೃತ್ವದಲ್ಲಿ, ಇನ್ಸ್  ಪೆಕ್ಟರ್ ಇಮ್ರಾನ್ ಬೇಗ್, ಸಿಬ್ಬಂದಿ ವಸಂತ ಕಾಯಕದ, ನಾಗರಾಜ, ರಘುನಾಯ್ಕ, ಸುರೇಂದ್ರ, ಅರುಣ್ ಪವಾರ್, ಯೋಗೇಶ್ವರಪ್ಪ, ಚರಣ್ ರಾಜ್, ಜಯಂತ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Shimoga nanjappa hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment