SHIVAMOGGA LIVE NEWS, 8 FEBRUARY 2025
ಶಿವಮೊಗ್ಗ : ವಾಯುಪಡೆ ಅಧಿಕಾರಿ (Airforce) ಜಿ.ಎಸ್.ಮಂಜುನಾಥ್ ಅವರ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದೆ. ಹೊಸನಗರ ತಾಲೂಕು ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕೂರು ಗ್ರಾಮದಲ್ಲಿ ಅವರ ಮನೆ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕೂ ಮುನ್ನ ಹೊಸನಗರದಿಂದ ಪಾರ್ಥೀವ ಶರೀರದ ಮೆರವಣಿಗೆ ನಡೆಯಲಿದೆ.
ಈ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಸ್ಥಳೀಯ ಮುಖಂಡ ಮಂಜುನಾಥ ಸಣ್ಣಕ್ಕಿ, ವಾಯುಪಡೆ ಅಧಿಕಾರಿ ಜಿ.ಎಸ್.ಮಂಜುನಾಥ್ ಅವರ ಅಂತ್ಯಕ್ರಿಯೆ ಕುರಿತು ಮಾಹಿತಿ ನೀಡಿದರು.
ಹೊಸನಗರದಿಂದ ಮೆರವಣಿಗೆ
ಘಟನೆ ಕುರಿತು ತಾಲೂಕು ಆಡಳಿತದಿಂದ ಮಾಹಿತಿ ಬಂದಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಅಂತ್ಯಕ್ರಿಯೆಗೆ ಪೂರ್ಣ ಸಿದ್ಧತೆ ನಡೆಸುವಂತೆ ಸೂಚಿಸಿದ್ದಾರೆ. ಅದರಂತೆ ಸಕಲ ವ್ಯವಸ್ಥೆ ಮಾಡಲಾಗುತ್ತಿದೆ. ತಹಶೀಲ್ದಾರ್, ಸರ್ಕಲ್ ಇನ್ಸ್ಪೆಕ್ಟರ್ ಸೇರಿದಂತೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದೇವೆ.
ಮಂಜುನಾಥ ಸಣ್ಣಕ್ಕಿ, ಸ್ಥಳೀಯ ಮುಖಂಡ
ಫೆ.9ರಂದು ಬೆಳಗ್ಗೆ 8 ಗಂಟೆ : ಇಲ್ಲಿನ ಕೊಡಚಾದ್ರಿ ಕಾಲೇಜು ಮುಂಭಾಗದಿಂದ ಹೊಸನಗರದ ರಾಜಬೀದಿಯಲ್ಲಿ ವಾಯುಪಡೆಯ ವಾರಂಟ್ ಆಫೀಸರ್ ಜಿ.ಎಸ್.ಮಂಜುನಾಥ್ ಅವರ ಪಾರ್ಥೀವ ಶರೀರದ ಮೆರವಣಿಗೆ ನಡೆಸಲಾಗುತ್ತದೆ.
ವಾಯುಪಡೆ ವಾರಂಟ್ ವಾರಂಟ್ ಆಫೀಸರ್ ಜಿ.ಎಸ್.ಮಂಜುನಾಥ್ ಅವರ ಮನೆ ಮುಂಭಾಗದಲ್ಲಿ ದುಃಖತಪ್ತ ಕುಟುಂಬದವರು
ಬೆಳಗ್ಗೆ 11 ಗಂಟೆಗೆ : ಬೆಳಗಾವಿಯಿಂದ ವಾಯುಪಡೆ ಅಧಿಕಾರಿಗಳ ತಂಡ ಆಗಮಿಸಲಿದೆ. ಅವರು ವಾರಂಟ್ ಆಫೀಸರ್ ಜಿ.ಎಸ್.ಮಂಜುನಾಥ್ ಅವರ ಪಾರ್ಥೀವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಲಿದ್ದಾರೆ.
ಮಧ್ಯಾಹ್ನ 1 ಗಂಟೆ : ತಾಲೂಕು ಆಡಳಿತದ ವತಿಯಿಂದ ವಾರಂಟ್ ಆಫೀಸರ್ ಜಿ.ಎಸ್.ಮಂಜುನಾಥ್ ಅವರ ಪಾರ್ಥೀವ ಶರೀರಕ್ಕೆ ಗೌರವ ಸಲ್ಲಿಸಲಾಗುತ್ತದೆ.
ವಾಯುಪಡೆ ಅಧಿಕಾರಿ ಜಿ.ಎಸ್.ಮಂಜುನಾಥ್ ಅವರ ಅಂತ್ಯಕ್ರಿಯೆಗೆ ಸ್ಥಳ ಪರಿಶೀಲಿಸಿದ ಕುಟುಂಬದವರು.
ಮಧ್ಯಾಹ್ನ 2 ಗಂಟೆ : ವಾಯುಪಡೆ ಅಧಿಕಾರಿ ಜಿ.ಎಸ್.ಮಂಜುನಾಥ್ ಅವರ ಕುಟುಂಬದವರಿಗೆ ಪಾರ್ಥೀವ ಶರೀರ ಹಸ್ತಾಂತರ ಮಾಡಲಾತ್ತದೆ. ಕುಟುಂಬದರಿಂದ ಅಂತಿಮ ವಿಧಿವಿಧಾನ ನೆರವೇರಿಸಲಾಗುತ್ತದೆ.
ಇದನ್ನೂ ಓದಿ » ಪ್ಯಾರಾಚೂಟ್ ತೆರೆಯದೆ ಹೊಸನಗರ ಮೂಲದ ವಾಯುಸೇನೆ ಅಧಿಕಾರಿ ಸಾವು, ಹೇಗಾಯ್ತು ಘಟನೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200