ಹೊಸನಗರ: ಇತಿಹಾಸ ಪ್ರಸಿದ್ಧ ಅಮ್ಮನಘಟ್ಟದ (ammanaghatta) ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ಕಂಕಣ ಕಟ್ಟುವ ಮೂಲಕ ಚಾಲನೆ ನೀಡಲಾಯಿತು. ನೂರಾರು ಭಕ್ತರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.
ಸೆ.9 ರಿಂದ 19ರವರೆಗೆ ಜಾತ್ರೆ ನಡೆಯಲಿದೆ. ಪ್ರತಿ ಮಂಗಳವಾರ ಮತ್ತು ಶುಕ್ರವಾರದಂದು ಜಾತ್ರೆ ನಡೆಯಲಿದೆ. ದೇವಿ ಸನ್ನಿಧಿಯಲ್ಲಿ ಸೆ. 22ರಿಂದ ಅ.2ರವರೆಗೆ ನವರಾತ್ರಿ ಉತ್ಸವ ಹಾಗೂ ವಿಜಯ ದಶಮಿಯಂದು ಚಂಡಿಕಾ ಹೋಮ ಮತ್ತು ಪ್ರತಿನಿತ್ಯ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.
ಮೂಲಸ್ಥಾನಕ್ಕೆ ಪೂಜೆ
ಜಾತ್ರೆ ಅಂಗವಾಗಿ ಮೂಲಸ್ಥಾನ ಅಮ್ಮನಘಟ್ಟದ ಗುಹೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಜಾತ್ರೆಗೆ ಚಾಲನೆ ನೀಡಲಾಯಿತು. ಪ್ರಧಾನ ಅರ್ಚಕ ಭಾಸ್ಕರ ಜೋಯಿಸ್ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಜಾತ್ರೆ ಸಂದರ್ಭ ದೊಡ್ಡಸಂಖ್ಯೆಯ ಭಕ್ತರು ಅಮ್ಮನಘಟ್ಟದ ಜೇನುಕಲ್ಲಮ್ಮ ಗುಡ್ಡಕ್ಕೆ ಬಂದು ತಾಯಿಯ ದರ್ಶನ ಪಡೆದು ಪೂಜೆ ಸಲ್ಲಿಸುತ್ತಾರೆ.

ಇದನ್ನೂ ಓದಿ » ದೇವಸ್ಥಾನದಲ್ಲಿ ಕಳ್ಳತನವಾಗಿ ಎರಡೇ ಗಂಟೆಯಲ್ಲಿ ಆರೋಪಿ ಅರೆಸ್ಟ್, ಎಲ್ಲಿ?