ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 NOVEMBER 2023
RIPPONPETE : ಮನೆ ಸಮೀಪ ಒಣಗಲು ಹಾಕಿದ್ದ ಕ್ವಿಂಟಾಲ್ಗಟ್ಟಲೆ ಅಡಿಕೆಯನ್ನು ಕದ್ದೊಯ್ದಿದ್ದ ಇಬ್ಬರು ಆರೋಪಿಗಳನ್ನು ರಿಪ್ಪನ್ಪೇಟೆ ಪೊಲೀಸರು ಬಂಧಿಸಿದ್ದಾರೆ. ಅಡಿಕೆ ಮತ್ತು ಕೃತ್ಯಕ್ಕೆ ಬಳಸಿದ್ದ ಲಗೇಜ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ.
ಹೊಸನಗರದ ಹರತಾಳು ಗ್ರಾಮದ ರಾಘವೇಂದ್ರ (28) ಮತ್ತು ನಂಜವಳ್ಳಿ ಗ್ರಾಮದ ಶ್ರೀಧರ್ (52) ಬಂಧಿತರು.
ರಬ್ಬರ್ ಶೀಟ್ಗಳೂ ಪತ್ತೆ
ಹರತಾಳು ಮಜಿರೆ ಕ್ವಾಡ್ರಿಗೆ ಗ್ರಾಮದ ಬಾಲರಾಜ್ ಎಂಬುವವರ ಮನೆ ಪಕ್ಕದಲ್ಲಿ ನ.16ರಂದು ಒಣಗಿಸಲು ಹಾಕಿದ್ದ ಸುಮಾರು 1 ಲಕ್ಷ ರೂ. ಮೌಲ್ಯದ ಅಡಿಕೆ ಕಳ್ಳತನವಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಒಂದು ಕ್ವಿಂಟಾಲ್ 85 ಕೆ.ಜಿ ಅಡಿಕೆ, ಕೃತ್ಯಕ್ಕೆ ಬಳಸಿದ್ದ ಲಗೇಜ್ ಆಟೋ ವಶಪಡಿಸಿಕೊಂಡಿದ್ದಾರೆ. ಇನ್ನು, ರಿಪ್ಪನ್ಪೇಟೆ ಸುತ್ತಮುತ್ತ ಕಳುವಾಗಿದ್ದ 300 ರಬ್ಬರ್ ಶೀಟ್ಗಳನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ, ಭದ್ರಾವತಿ, ಶಿಕಾರಿಪುರದ ವಿವಿಧೆಡೆ ಮಳೆ ಅಬ್ಬರ, ಎಲ್ಲೆಲ್ಲಿ ಮಳೆಯಾಗುತ್ತಿದೆ?
ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರ, ಹೊಸನಗರ ಇನ್ಸ್ಪೆಕ್ಟರ್ ಗುರಣ್ಣ ಹೆಬ್ಬಾಳ್ ಮೇಲ್ವಿಚಾರಣೆಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ರಿಪ್ಪನ್ಪೇಟೆ ಪಿಎಸ್ಐ ಪ್ರವೀಣ್, ಸಿಬ್ಬಂದಿ ಶಿವಕುಮಾರ್ ನಾಯ್ಕ, ಉಮೇಶ್ ಮತ್ತು ಸಂತೋಷ್ ತಂಡದಲ್ಲಿದ್ದರು.
ಇದನ್ನೂ ಓದಿ – ತೀರ್ಥಹಳ್ಳಿ ತುಂಗಾ ಕಾಲೇಜು ಸಮೀಪ ಭೀಕರ ಅಪಘಾತ, ನಜ್ಜುಗುಜ್ಜಾದ ಫಾರ್ಚುನರ್
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






