ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ: ತಾಲ್ಲೂಕಿನ ಕಟ್ಟಿನಹೊಳೆ ನಿವಾಸಿ ಹಾಗೂ ಕೊಡಚಾದ್ರಿ (Kodachadri) ಇ.ಡಿ.ಸಿ ಸಮಿತಿ ಅಧ್ಯಕ್ಷ ಕೆ.ಟಿ.ಸುಬ್ರಹ್ಮಣ್ಯ ಮತ್ತು ಅವರ ಪತ್ನಿ ಮೀನಾಕ್ಷಿ ಅವರ ಮೇಲೆ ಶನಿವಾರ ರಾತ್ರಿ ಹಲ್ಲೆ ಹಾಗೂ ಕಲ್ಲು ತೂರಾಟ ನಡೆದಿದೆ. ಈ ಘಟನೆಯಲ್ಲಿ ಸುಬ್ರಹ್ಮಣ್ಯ ಅವರ ತಲೆಗೆ ಗಾಯವಾಗಿದ್ದು, ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಸುಬ್ರಹ್ಮಣ್ಯ ಅವರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶನಿವಾರ ರಾತ್ರಿ 2 ಗಂಟೆ ಸುಮಾರಿಗೆ ಸಂಬಂಧಿಗಳಿಬ್ಬರು ಅತಿಕ್ರಮವಾಗಿ ಮನೆ ಪ್ರವೇಶಿಸಿದ್ದಾರೆ. ಬಾಗಿಲು ತೆರೆಯುತ್ತಿದ್ದಂತೆಯೇ ಇಬ್ಬರೂ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್ನಲ್ಲಿ ಮಿನಿ ಬಸ್ ಪಲ್ಟಿ

LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















