SHIVAMOGGA LIVE NEWS | 4 DECEMBER 2024
ಹೊಸನಗರ : ನಾನೇನು ಸನ್ಯಾಸಿ ಅಲ್ಲ. ಮೂರು ಬಾರಿ ಶಾಸಕನಾಗಿದ್ದೇನೆ. ಸಚಿವ ಸ್ಥಾನದ (Minister) ಆಕಾಂಕ್ಷಿಯಾಗಿಯೇ ಇರ್ತೇನೆ. ಅವಕಾಶ ಕೊಟ್ಟರೆ ಕೆಲಸ ಮಾಡುತ್ತೇನೆ. ಆದರೆ ಅದಕ್ಕಾಗಿ ಹೈಕಮಾಂಡ್ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.
ಹೊಸನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ನಮ್ಮ ಮುಖಂಡರ ಜೊತೆ ಚರ್ಚೆ ಮಾಡಿದ್ದಾರೆ. ಮಾರ್ಚ್‌ವರೆಗೆ ಸಚಿವ ಸಂಪುಟದ ಬಗ್ಗೆ ಪ್ರಸ್ತಾಪ ಮಾಡಬಾರದು ಎಂದು ಹೇಳಿದ್ದಾರೆ. ಹಾಗಾಗಿ ಸದ್ಯಕ್ಕೆ ಸಚಿವ ಸಂಪುಟ ಪುನರಚನೆ ವಿಚಾರ ನನೆಗುದ್ದಿಗೆ ಬಿದ್ದಿದೆ. ಸಚಿವ ಸಂಪುಟ ಪುನರಚನೆ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದರು.
ಇದನ್ನೂ ಓದಿ » ಸಿಲಿಂಡರ್ ಸ್ಪೋಟ, ಭದ್ರಾವತಿ ಗೋಬಿ ಮಂಚೂರಿ ಅಂಗಡಿ ಮಾಲೀಕ ಸಾವು
ಬಿಜೆಪಿಯಲ್ಲಿ ಈಗ ಬೆಂಕಿ ಬಿದ್ದಿದೆ. ನಮ್ಮ ಪಕ್ಷದಲಲ್ಲ, ಸರ್ಕಾರ ಗಟ್ಟಿ ಇದೆ. ಉಪ ಚುನಾವಣೆಯಿಂದ ಸಿಎಂ ಹುಮ್ಮಸ್ಸಿನಲ್ಲಿದ್ದಾರೆ ಎಂದು ಗೊಂದಲ ಸೃಷ್ಟಿ ಮಾಡಿದ ಪಕ್ಷದಲ್ಲೇ ಈಗ ಬೆಂಕಿ ಬಿದ್ದಿದೆ. ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರು ಗೆಲ್ಲುತ್ತೇವೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳುತ್ತಿದ್ದರು. ಈಗ ವಿಜಯೇಂದ್ರ ನಾಯಕತ್ವದಲ್ಲಿ ಮೂರಕ್ಕೆ ಮೂರು ಸೋತಿದ್ದಾರೆ. ನೈತಿಕ ಹೊಣೆ ಹೊತ್ತು ವಿಜಯೇಂದ್ರ ರಾಜೀನಾಮೆ ಕೊಡಬೇಕು ಆಗ್ರಹಿಸಿದರು. ಬಿಜೆಪಿಯವರೇ ರಾಜೀನಾಮೆ ಕೇಳುತ್ತಿದ್ದಾರೆ ನಾವೇನು ಕೇಳಬೇಕಾದ ಅವಶ್ಯಕತೆ ಇಲ್ಲ ಎಂದರು.