ಶಿವಮೊಗ್ಗ ಲೈವ್.ಕಾಂ |RIPPONPETE NEWS | 5 ಸೆಪ್ಟೆಂಬರ್ 2021
ಕಾರು ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ರಿಪ್ಪನ್’ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂಟಪದ ಬಳಿ ರಾತ್ರಿ ಘಟನೆ ಸಂಭವಿಸಿದೆ.
ರಿಪ್ಪನ್’ಪೇಟೆಯ ಮುಸ್ತಫಾ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೇಗಾಯ್ತು ಅಪಘಾತ?
ಮುಸ್ತಫಾ ಅವರು ಗರ್ತಿಕೆರೆಯಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದಾರೆ. ರಾತ್ರಿ ಅಂಗಡಿಯಿಂದ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ. ರಿಪ್ಪನ್’ಪೇಟೆ ಮಾರ್ಗದಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಕಾರು ಚಾಲಕ ಎಸ್ಕೇಪ್
ಕಾರು ಡಿಕ್ಕಿಯಾದ ರಭಸಕ್ಕೆ ಬೈಕು ರಸ್ತೆಯ ಪಕ್ಕಕ್ಕೆ ಹೋಗಿ ಬಿದ್ದಿದೆ. ಬೈಕು ನುಜ್ಜುಗುಜ್ಜಾಗಿದೆ. ಕಾರಿನ ಮುಂಭಾಗಕ್ಕೂ ಹಾನಿಯಾಗಿದೆ. ಇನ್ನು, ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ.
ರಿಪ್ಪನ್’ಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200