ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ: ಲಾರಿ ಮತ್ತು ಕಾರು ಡಿಕ್ಕಿಯಾಗಿ (Mishap) ಇಬ್ಬರು ಗಾಯಗೊಂಡಿದ್ದಾರೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಹೊಸನಗರ ತಾಲ್ಲೂಕಿನ ನಗರ ಸಮೀಪದ ಶಾಂತಿಕೆರೆ ಬಳಿಯ ಬೈಂದೂರು- ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯ 766 ಸಿ ಮಾರ್ಗದಲ್ಲಿ ಡಿಕ್ಕಿ ಸಂಭವಿಸಿದೆ.
ಕುಂದಾಪುರ ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಕಾರಗಡಿಯಿಂದ ಚಕ್ಕಾರಿನೆಡೆ ಮದುವೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನಲ್ಲಿದ್ದ ತಲನೇರಿ ಶೇಖರಪ್ಪ ಗೌಡ ಮತ್ತು ನವೀನಾ ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಿಂದಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ನಗರ ಪೊಲೀಸ್ ಠಾಣೆ ಎಎಸ್ಐ ಕುಮಾರ್ ಮತ್ತು ಸಿಬ್ಬಂದಿ ಸಂಚಾರ ಸುಗಮಗೊಳಿಸಿದರು.





ಇದನ್ನೂ ಓದಿ » ಲಾರಿ ಹರಿದು ಮೂರು ವರ್ಷ ಮಗು ಸಾವು, ಹೇಗಾಯ್ತು ಘಟನೆ?

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





