ಲೈಂಗಿಕ ಕಿರುಕುಳ ಆರೋಪ, ಸರ್ಕಾರಿ ಶಾಲೆಯ ಶಿಕ್ಷಕ, ಶಿಕ್ಷಕಿ ವಿರುದ್ಧ ಕೇಸ್, ಏನಿದು ಪ್ರಕರಣ?

SHIVAMOGGA LIVE NEWS | 5 FEBRUARY 2023

 RIPPONPETE | ಸರ್ಕಾರಿ ಶಾಲೆಯೊಂದರ 5ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಸಂಬಂಧ ಶಿಕ್ಷಕ (Teacher) ಮತ್ತು ಶಿಕ್ಷಕಿ ವಿರುದ್ಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ. (ಈ ಸುದ್ದಿಯನ್ನು ಇನ್ನು 67 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಶಿಕ್ಷಕನಿಂದ ಲೈಂಗಿಕ ಕಿರುಕುಳ

5ನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಶಾಲೆಯ ಶಿಕ್ಷಕನೊಬ್ಬ (Teacher) ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದೆ. ಈ ಸಂಬಂಧ ವಿದ್ಯಾರ್ಥಿನಿ ತನ್ನ ತಾಯಿಗೆ ವಿಚಾರ ತಿಳಿಸಿದ್ದಾಳೆ. ವಿದ್ಯಾರ್ಥಿನಿಯ ತಾಯಿ ಶಾಲೆಗೆ ತೆರಳಿ ಶಿಕ್ಷಕಿಯೊಬ್ಬರಿಗೆ ಲೈಂಗಿಕ ಕಿರುಕುಳದ ಕುರಿತು ದೂರಿದ್ದಾರೆ. ಆ ಶಿಕ್ಷಕನಿಗೆ ತಿಳಿ ಹೇಳುವಂತೆ ಮನವಿ ಮಾಡಿದ್ದಾರೆ.

crime name image

‘ಟಿಸಿ ಕೊಡಬೇಕಾಗುತ್ತದೆ’

ವಿದ್ಯಾರ್ಥಿನಿಯ ತಾಯಿಯ ಆರೋಪ ನಿರಾಕರಿಸಿದ ಶಿಕ್ಷಕಿ, ಸುಳ್ಳು ಆರೋಪ ಮಾಡಿದರೆ ಟಿಸಿ ಕೊಡಬೇಕಾಗುತ್ತದೆ ಎಂದು ಬೆದರಿಕೆ ಒಡ್ಡಿದ್ದಾರೆ. ಆಗ ವಿದ್ಯಾರ್ಥಿನಿಯ ತಾಯಿ, ತನ್ನ ಪತಿಗೆ ವಿಚಾರ ತಿಳಿಸಿದ್ದಾರೆ. ಅಷ್ಟು ಹೊತ್ತಿಗೆ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಮನೆಗೆ ಬಂದಿದ್ದಾರೆ. ವಿದ್ಯಾರ್ಥಿನಿಯಿಂದ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.

ಇದನ್ನೂ ಓದಿ – ಬೈಕಿನಿಂದ ಬಿದ್ದು ಹಿಂಬದಿ ಸವಾರ ಸಾವು | ಬಾರ್ ಕ್ಯಾಶಿಯರ್ ತಲೆಗೆ ಬಾಟಲಿ ಹೊಡೆದ ಕುಡುಕರು | ಜಿಲ್ಲೆಯ 5 CRIME NEWS

ಘಟನೆ ಸಂಬಂಧ ಶಾಲೆಯ ಶಿಕ್ಷಕ ಮತ್ತು ಶಿಕ್ಷಕಿ ವಿರುದ್ಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

crime name image

Leave a Comment