ಶಿವಮೊಗ್ಗ ಲೈವ್.ಕಾಂ | SHIMOGA | 28 ಮಾರ್ಚ್ 2020
14 ದಿನ ಹೋಂ ಕ್ವಾರಂಟೈನ್’ನಲ್ಲಿ ಇರಬೇಕು ಎಂದು ವೈದ್ಯರು ಸೂಚಿಸಿದ್ದರು, ಹೊಸನಗರದ ವ್ಯಕ್ತಿಯೊಬ್ಬರು ಹೊಸನಗರ ಪಟ್ಟಣ ಮತ್ತು ಸುತ್ತಮುತ್ತ ಹಳ್ಳಿಗಳಿಗೆ ಹೋಗಿ ಬಂದಿದ್ದಾರೆ. ಇದು ತಿಳಿಯುತ್ತಿದ್ದಂತೆ ಆ ವ್ಯಕ್ತಿ ವಿರುದ್ಧ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಸನಗರದ ಡಾ.ಅಂಬೇಡ್ಕರ್ ಕಾಲೋನಿಯ ರಾಧಾಕೃಷ್ಣ ಅವರು ಕರೋನ ಬಾದಿತ ಫ್ರಾನ್ಸ್ ದೇಶದಿಂದ ಬಂದಿದ್ದರು. ಇವರ ಪರೀಕ್ಷೆ ನಡೆಸಿದ್ದ ವೈದ್ಯರು, 14 ದಿನ ಹೋಂ ಕ್ವಾರಂಟೈನ್’ನಲ್ಲಿ ಇರುವಂತೆ ಸೂಚಿಸಿದ್ದರು. ಆದರೂ ರಾಧಾಕೃಷ್ಣ ಅವರು ಹೊರಗೆ ಸುತ್ತಾಡುತ್ತಿದ್ದರು.
ಕಿರಿಯ ಆರೋಗ್ಯ ಸಹಾಯಕಿ ಶೋಭಾ ಮತ್ತು ಅರೋಗ್ಯ ಸಹಾಯಕರು, ಹೊಂ ಕ್ವಾರಂಟೈನ್ ಪರಿಶೀಲನೆ ನಡೆಸುತ್ತಿದ್ದ ವೇಳೆ, ರಾಧಾಕೃಷ್ಣ ಅವರು ಹೊರಗೆ ಸುತ್ತಾಡುತ್ತಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ರಾಧಾಕೃಷ್ಣ ಅವರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ಹೊಸನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 188, 269, 271 ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
