ವಿದ್ಯುತ್ ಸ್ಪರ್ಶ, ಕಂಬದಿಂದ ಬಿದ್ದು ಗುತ್ತಿಗೆ ಕಾರ್ಮಿಕ ಸಾವು, ಮತ್ತೊಬ್ಬನಿಗೆ ಗಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | HOSANAGARA | 15 ಮಾರ್ಚ್ 2020

ವಿದ್ಯುತ್ ಕಂಬದ ಮೇಲೆ ಕುಳಿತು ಕೆಲಸ ಮಾಡುತ್ತಿದ್ದ ಗುತ್ತಿಗೆ ಕಾರ್ಮಿಕನಿಗೆ ವಿದ್ಯುತ್ ಶಾಕ್ ತುಗುಲಿ, ಕಂಬದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ. ಮತ್ತೊಬ್ಬ ಗುತ್ತಿಗೆ ಕಾರ್ಮಿಕನಿಗೆ ವಿದ್ಯತ್ ಸ್ಪರ್ಶವಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗುತ್ತಿಗೆ ಕಾರ್ಮಿಕ ಮಾರುತಿ (28) ಮೃತಪಟ್ಟಿದ್ದಾನೆ. ಮಹೇಶ (26)  ಎಂಬಾತನಿಗೆ ವಿದ್ಯುತ್ ಸ್ಪರ್ಶವಾಗಿದೆ. ಅವರನ್ನು ಹೊಸನಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ವಸವೆ ಗ್ರಾಮದಲ್ಲಿ ಶನಿವಾರ ವಿದ್ಯುತ್ ಕಂಬದ ಮೇಲೆ ಕುಳಿತು ಕೆಲಸ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೃತ ಮಾರುತಿ ಮತ್ತು ಗಾಯಗೊಂಡಿರುವ ಮಹೇಶ ಅವರು ಹಾವೇರಿಯವರು ಎಂದು ಹೇಳಲಾಗುತ್ತಿದೆ. ಇವರು ಹೊಸನಗರದ ಗುತ್ತಿಗೆದಾರರೊಬ್ಬರ ಕೆಲಸಕ್ಕೆ ಸೇರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment