ಶಿವಮೊಗ್ಗ LIVE
ಹೊಸನಗರ: ತಾಲೂಕಿನ ಯಡೂರು ಗ್ರಾಮದಲ್ಲಿ ಶನಿವಾರ ಚಿರತೆಯ ಮೃತದೇಹ (Dead leopard) ಪತ್ತೆಯಾಗಿದೆ. ಬೆಳಗ್ಗೆ ಅರಣ್ಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಯಡೂರು ಗ್ರಾಮದಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ.
ಮರಣೋತ್ತರ ಪರೀಕ್ಷೆಯ ನಂತರ ಚಿರತೆ 5 ವರ್ಷದ ಪ್ರಾಯದ್ದು ಎಂದು ಗೊತ್ತಾಗಿದೆ. ಮೇಲ್ನೋಟಕ್ಕೆ ಸ್ವಾಭಾವಿಕ ಸಾವು ಎಂದು ತಿಳಿದುಬಂದಿದೆ. ಆರ್ಎಫ್ಒ ಸಂತೋಷ ಮಲ್ಲನಗೌಡ್ರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಶು ವೈದ್ಯಾಧಿಕಾರಿಗಳಿಂದ ಮರಣೋತ್ತರ ಪರೀಕ್ಷೆ ನಡೆದು ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮನೆಯೊಳಗೆ ನುಗ್ಗಿ ವೃದ್ಧೆಯ ಕೈಲಿದ್ದ ರೋಲ್ಡ್ ಗೋಲ್ಡ್ ಬಳೆ ಕದ್ದೊಯ್ದ ಕಳ್ಳರು..!
ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮೃತದೇಹ ಪತ್ತೆಯಾದ ಜಾಗದಲ್ಲೇ ನಿಯಮಾನುಸಾರ ಅಂತ್ಯಕ್ರಿಯೆ ಮಾಡಲಾಯಿತು. ತಹಸೀಲ್ದಾರ್ ಭರತ್ ರಾಜ್, ಎಸಿಎಫ್ ಮೋಹನ್ ಕುಮಾರ್, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು





