SHIVAMOGGA LIVE NEWS | 10 JULY 2024
SHIMOGA : ಶಂಕಿತ ಡೆಂಗ್ಯುಗೆ (Dengue Suspect) ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಡೆಂಗ್ಯುಗೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಇದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ರಿಪ್ಪನ್‌ಪೇಟೆಯ ಮಹಿಳೆ ಸಾವು
ಶಂಕಿತ ಡೆಂಗೆಗೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ನಿವಾಸಿ ರಶ್ಮಿ ಆರ್. ನಾಯಕ್ (42) . ಮಂಗಳವಾರ ಮೃತಪಟ್ಟಿದ್ದಾರೆ. ಕಳೆದ 15 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ದಾಖಲಾಗಿದ್ದ ರಶ್ಮಿ ಆರ್.ನಾಯಕ್ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಮೃತ 9 ತಿಂಗಳ ಮಗುವಿಗೆ ಡೆಂಗ್ಯು ಶಂಕೆ
ಶಿರಾಳಕೊಪ್ಪ ಪಟ್ಟಣದ ಕಾನುಕೇರಿಯ 9 ತಿಂಗಳ ಮಗು ಶಂಕಿತ ಡೆಂಗೆ ಜ್ವರದಿಂದ ಮೃತಪಟ್ಟಿದೆ. ಮಗುವಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶಾಸಕ ಬಿ.ವೈ.ವಿಜಯೇಂದ್ರ ಅವರು ಶಿರಾಳಕೊಪ್ಪದಲ್ಲಿ ಮಗುವಿನ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಜಿಲ್ಲೆಯಲ್ಲಿ ಮುಂದುವರೆದ ಡೆಂಗ್ಯು ಭೀತಿ
ಶಿವಮೊಗ್ಗ ಜಿಲ್ಲೆಯಲ್ಲಿ ಡೆಂಗ್ಯು ಭೀತಿ ಆವರಿಸಿದೆ. ಈವರೆಗೂ ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಡೆಂಗ್ಯು ಪ್ರಕರಣಗಳ ಸಂಖ್ಯೆ 308. ಸದ್ಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಸಕ್ರಿಯ ಪ್ರಕರಣಗಳು 14 ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಬೆಳಗ್ಗೆ ದೇಗುಲಕ್ಕೆ ಬಂದ ಅರ್ಚಕರಿಗೆ ಕಾದಿತ್ತು ಆಘಾತ, ವಿಷಯ ತಿಳಿದು ಕಮಿಟಿಯವರಿಗೆ ದಿಗ್ಭ್ರಮೆ, ಆಗಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200