ರಿಪ್ಪನ್‌ಪೇಟೆ : ಹೊಂಬುಜ (Hombuja) ಕ್ಷೇತ್ರದ ಶ್ರೀ ಪದ್ಮಾವತಿ ದೇವಿ ಹಾಗೂ ಶ್ರೀ ಪಾರ್ಶ್ವನಾಥ ತೀರ್ಥಂಕರರ ವಾರ್ಷಿಕ ಮಹಾರಥೋತ್ಸವ ವಿಜೃಂಭಣೆಯಿಂದ ನೆರವೇರಿತು.
ಶನಿವಾರ ಮುಂಜಾನೆಯಿಂದ ಕ್ಷೇತ್ರ ದೇವತೆಗಳಿಗೆ ಪೂಜಾ ಕೈಂಕರ್ಯಗಳು ನಡೆದವು. ಮಧ್ಯಾಹ್ನ 12.53ಕ್ಕೆ ಶ್ರೀ ಪದ್ಮಾವತಿ ದೇವಿ ಮತ್ತು ಶ್ರೀ ಪಾರ್ಶ್ವನಾಥ ಸ್ವಾಮಿ ಉತ್ಸವ ಮೂರ್ತಿಗಳ ಮಹಾರಥೋತ್ಸವ ನಡೆಯಿತು. ರಾಜ್ಯ ಹೊರರಾಜ್ಯಗಳಿಂದ ಆಗಮಿಸಿದ ಸಾವಿರಾರು ಭಕ್ತರು ದೇವಿಯ ಜಯಘೋಷದೊಂದಿಗೆ ಭಾವಪರವಶರಾದರು.
![]() |
ಜಾತ್ರಾ ಮಹೋತ್ಸವದಲ್ಲಿ ಶ್ರೀ 108 ಕುಂಥುಸಾಗರ ಮಹಾರಾಜ್, ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸೇರಿದಂತೆ ಅನೇಕ ಮುನಿವರ್ಯರು ಪಾಲ್ಗೊಂಡಿದ್ದರು. ವಿವಿಧ ರೀತಿಯ ಮಂಗಳ ವಾದ್ಯ, ಜಾನಪದ ಕಲಾತಂಡಗಳು ಹಾಗೂ ದೇವಿಗೆ ಚಾಮರ ಬೀಸುವ ಗಜರಾಜನು ಜಾತ್ರಾ ಮಹೋತ್ಸಕ್ಕೆ ಹೆಚ್ಚಿನ ಮೆರುಗು ನೀಡಿತು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ರಥಯಾತ್ರೆ ಸಂಚರಿಸಿದಾಗ ಗ್ರಾಮಸ್ಥರು ದೇವರಿಗೆ ಹಣ್ಣು ಕಾಯಿ, ನೈವೇದ್ಯ ಅರ್ಪಿಸಿದರು. ಹಣ್ಣು ಮತ್ತು ಹೂವುಗಳನ್ನು ರಥಕ್ಕೆ ಬೀರುವ ಮೂಲಕ ಭಕ್ತರು ಭಕ್ತಿ ಸಮರ್ಪಿಸಿದರು. ಮಠದ ಗಜಲಕ್ಷ್ಮಿ ಐಶ್ವರ್ಯಾ ಭಕ್ತಿಯ ವಂದನೆ ಸಲ್ಲಿಸಿತು. ಸುಡುವ ಬಿಸಿಲಿನ ನಡುವೆಯೂ ನೆರೆದ ಸಹಸ್ರಾರು ಭಕ್ತರು ದೇವಿಯ ರಥ ಎಳೆದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ವಿಜೃಂಭಣೆಯಿಂದ ಶ್ರೀಕಾಂತ್ ಜನ್ಮದಿನಾಚರಣೆ, ಹೇಗಿತ್ತು ಸಂಭ್ರಮ? ಯಾರೆಲ್ಲ ಏನೆಲ್ಲ ಹೇಳಿದರು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200