ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SWAMIJI | 4 ಜೂನ್ 2022
ದೈವ ಸಾನ್ನಿಧ್ಯಕ್ಕೆ ತೊಂದರೆ ಆಗಿದ್ದ ಹಲವು ಕಡೆ ಪುನರ್ ಪ್ರತಿಷ್ಠಾಪನಾ ಕಾರ್ಯಕಗಳು ನಡೆಯುತ್ತಿವೆ. ಸರ್ಕಾರಗಳು ಕೂಡ ಇದಕ್ಕೆ ಬೆಂಬಲವಾಗಿ ನಿಂತಿರುವುದು ಸಂತೋಷದ ವಿಚಾರ ಎಂದು ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರು ಹೇಳಿದರು.
ಹೊಸನಗರದ ಶ್ರೀ ಚಂದ್ರಮೌಳೇಶ್ವರ ದೇವಾಲಯದಲ್ಲಿ ದೇವರ ಧ್ವಜಸ್ತಂಭ ಪ್ರತಿಷ್ಠಾ ಅಂಗವಾಗಿ ಧರ್ಮ ಸಭೆ ನಡೆಸಲಾಯಿತು. ಇದರ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರು, ಶರಾವತಿ ತಟದ ಮೇಲಿನ ಶ್ರೀ ಚಂದ್ರಮೌಳೇಶ್ವರ ಮತ್ತು ಶ್ರೀ ಉಮಾಪತಿ ದೇವಾಲಯಗಳು ವೈಭವದಿಂದ ರೂಪುಗೊಂಡಿದೆ ಎಂದು ಸಂತಸವ ವ್ಯಕ್ತಪಡಿಸಿದರು.
ಈ ಕ್ಷೇತ್ರಗಳು ಧಾರ್ಮಿಕ ಭಕ್ತಿ ಕ್ಷೇತ್ರವಾಗಿ ಮಾತ್ರ ರೂಪುಗೊಳ್ಳದೆ, ಪ್ರೇಕ್ಷಣೀಯಯ ಸ್ಥಳವಾಗಿವೆ ಎಂದು ತಿಳಿಸಿದರು.
ಸಂಸದ ಬಿ.ವೈ.ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ, ಹೊರನಾಡು ಕ್ಷೇತ್ರದ ಧರ್ಮಕರ್ತರಾದ ಡಾ. ಭೀಮೇಶ್ವರ ಜೋಯಿಸ್, ವಾಸ್ತು ಶಿಲ್ಪ ತಜ್ಞರಾದ ಡಾ ಮಹೇಶ್ ಮುನಿಯಂಗಳ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಶಾಸಕ ಹರತಾಳು ಹಾಲಪ್ಪ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಗ್ರಾಮ ದೇವತೆಗೆ ವೈಭವದ ರಥ, ಗ್ರಾಮ ಸಮಿತಿಗೆ ಹಸ್ತಾಂತರ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422