ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 7 JULY 2023
SAGARA / HOSANAGARA : ವ್ಯಾಪಕ ಮಳೆಯಾಗುತ್ತಿರುವ ಪ್ರದೇಶದಲ್ಲಿ ಸ್ಥಳೀಯ ಶಾಲಾಭಿವೃದ್ಧಿ ಸಮಿತಿ ಮತ್ತು ಆಡಳಿತ ಮಂಡಳಿ ತೀರ್ಮಾನದಂತೆ ರಜೆ (Holiday) ಘೋಷಿಸಲು ಶಿಕ್ಷಣ ಇಲಾಖೆ ಮೌಖಿಕವಾಗಿ ಆದೇಶಿಸಿದೆ. ಈ ಮಧ್ಯೆ ಶಾಲೆಗಳಿಗೆ ರಜೆ ಎಂಬ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಗೊಂದಲ ಸೃಷ್ಟಿಯಾಗಿತ್ತು.
ಸಾಗರದ ಕರೂರು ಹೋಬಳಿ
ಸಾಗರ ತಾಲೂಕು ಕರೂರು ಹೋಬಳಿಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 82.4 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯಧಿಕ ಮಳೆಯಾದ ಹೋಬಳಿ ಇದಾಗಿದೆ. ಇಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ತೀವ್ರತೆ ಸ್ವಲ್ಪ ಕಡಿಮೆಯಾಗಿದೆ. ಇವತ್ತು ರಾತ್ರಿ ಅಥವಾ ಶನಿವಾರ ಬೆಳಗ್ಗೆ ಮಳೆ ಹೆಚ್ಚಾದಲ್ಲಿ ಶಾಲೆಗಳಿಗೆ ರಜೆ ಘೋಷಿಸುವ ಸಾದ್ಯತೆ ಇದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಈ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಟಿ.ನಿಂಗಪ್ಪ, ಮಳೆ ಹೆಚ್ಚಾಗಿ ಮಕ್ಕಳು ಶಾಲೆಗೆ ಬರಲು ಆಗದಿರುವ ಪರಿಸ್ಥಿತಿ ಇದ್ದಲ್ಲಿ ಮಾತ್ರ ರಜೆ (Holiday) ಘೋಷಿಸಬಹುದು. ಗ್ರಾಮ ಪಂಚಾಯಿತಿ ಮುಖಂಡರು, ಶಾಲಾಭಿವೃದ್ಧಿ ಸಮಿತಿ ಮತು ಶಾಲೆಯ ಆಡಳಿತ ಮಂಡಳಿ ತಮ್ಮ ಹಂತದಲ್ಲಿ ತೀರ್ಮಾನ ಕೈಗೊಂಡು ಆಯಾ ಶಾಲೆಗಳಿಗೆ ರಜೆ ಘೋಷಿಸಬಹುದಾಗಿದೆ ಎಂದರು.
ಹೊಸನಗರದ ನಗರ ಹೋಬಳಿ
ಹೊಸನಗರ ತಾಲೂಕು ನಗರ ಹೋಬಳಿಯಲ್ಲು ಎಡೆಬಿಡದೆ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 70.9 ಮಿ.ಮೀ ಮಳೆಯಾಗಿದೆ. ಈ ಹಿನ್ನೆಲೆ ಅಗತ್ಯವಿದ್ದಲ್ಲಿ ಶಾಲೆಗಳಿಗೆ ರಜೆ ನೀಡಲು ಶಾಲಾಭಿವೃದ್ಧಿ ಸಮಿತಿ ಮತ್ತು ಆಡಳಿತ ಸಮಿತಿಗೆ ಅವಕಾಶ ನೀಡಲಾಗಿದೆ.
ಆಯಾ ಶಾಲಾ ವ್ಯಾಪ್ತಿಯಲ್ಲಿ ಮಳೆ ಮತ್ತು ಗಾಳಿಯ ತೀವ್ರತೆ ಇದ್ದರೆ ರಜೆ ನೀಡಲು ಶಾಲಾಭಿವೃದ್ಧಿ ಸಮಿತಿ ಮತ್ತು ಆಡಳಿತ ಮಂಡಳಿಗೆ ಅನುಮತಿ ನೀಡಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕು, ಹೋಬಳಿಯಲ್ಲಿ ಎಷ್ಟು ಮಳೆಯಾಗಿದೆ? ಕಳೆದ 24 ಗಂಟೆಯ ಕಂಪ್ಲೀಟ್ ರಿಪೋರ್ಟ್
ವೈರಲ್ ಆಯ್ತು ತಪ್ಪು ಸಂದೇಶ
ಕರೂರು ಹೋಬಳಿಯಲ್ಲಿ ರಜೆ ಘೋಷಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್ ವೈರಲ್ ಆಗಿತ್ತು. ವಿಚಾರ ತಿಳಿಯುತ್ತಿದ್ದಂತೆ ಕ್ಷೇತ್ರ ಶಿಕ್ಷಣಾದಿಕಾರಿ ಕೆ.ಟಿ.ನಿಂಗಪ್ಪ ಸ್ಪಷ್ಟನೆ ನೀಡಿದ್ದಾರೆ.
ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಆದರೆ ಪ್ರಮಾಣ ಸ್ವಲ್ಪ ತಗ್ಗಿದೆ. ಒಂದು ವೇಳೆ ಮಳೆ ಹೆಚ್ಚಾದರೆ ಶಾಲೆಗಳಿಗೆ ರಜೆ ಘೋಷಿಸಬಹುದಾಗಿದೆ.