ವಿಷ ಸೇವಿಸಿದ್ದ ರೈತ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕೊನೆಯುಸಿರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 SEPTEMBER 2023

RIPPONPETE : ಸಾಲ ಬಾಧೆ ತಾಳಲಾರದೆ ರೈತರೊಬ್ಬರು (Farmer) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ರಿಗೆ ಗ್ರಾಮದ ಕೃಷಿಕ ಕೃಷ್ಣಮೂರ್ತಿ (60) ಆತ್ಮಹತ್ಯೆ ಮಾಡಿಕೊಂಡವರು.

ಸೆ. 10ರಂದು ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಭತ್ತ, ಕಬ್ಬು, ಶುಂಠಿ ಹಾಗೂ ಅಡಿಕೆ ಬೆಳೆಗಾಗಿ ಬ್ಯಾಂಕ್‌ ಮತ್ತು ಕಗಡ ಪಡೆದಿದ್ದರು ಎಂದು ಹೇಳಲಾಗುತ್ತಿದೆ. ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಭತ್ತ, ಹೆಚ್ಚು ನೀರು ಬೇಡುವ ಬೆಳೆ ಬೆಳೆಯದಂತೆ ರೈತರಿಗೆ ಸೂಚನೆ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment