ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 24 MARCH 2023
RIPPONPETE : ಸಕಲ ಸರ್ಕಾರಿ ಗೌರವದೊಂದಿಗೆ ಅಸ್ಸಾಂ ರೈಫಲ್ಸ್ ಯೋಧ (Soldier) ಸಂದೀಪ್ ಅವರ ಅಂತ್ಯಕ್ರಿಯೆ ನಡೆಯಿತು. ಇದಕ್ಕೂ ಮೊದಲು ಪಟ್ಟಣದಲ್ಲಿ ನಡೆದ ಅಂತಿಮ ಯಾತ್ರೆಯಲ್ಲಿ ದೊಡ್ಡ ಸಂಖ್ಯೆಯ ಜನ ಪಾಲ್ಗೊಂಡಿದ್ದರು. ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿ, ಅಗಲಿದ ಯೋಧನಿಗೆ ಗೌರವ ಸಲ್ಲಿಸಿದರು.
ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ರಿಪ್ಪನ್ ಪೇಟೆ ಮೂಲದ ಯೋಧ (Soldier) ಸಂದೀಪ್ ಮೃತಪಟ್ಟಿದ್ದರು. ಅವರ ಮೃತದೇಹ ರಿಪ್ಪನ್ ಪೇಟೆಯ ಶಬರೀಶನಗರದಲ್ಲಿರುವ ಮನೆಗೆ ತರಲಾಗಿತ್ತು. ಈ ವೇಳೆ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.
ಸರ್ಕಲ್ ನಲ್ಲಿ ಕುಶಾಲತೋಪು
ರಿಪ್ಪನ್ ಪೇಟೆ ಪಟ್ಟಣದಲ್ಲಿ ಯೋಧ ಸಂದೀಪ್ ಅವರ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಯಿತು. ಸಂದೀಪ್ ಅವರ ಸಂಬಂಧಿಕರು, ಸ್ನೇಹಿತರು, ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಮೆರವಣಿಗೆಯಲ್ಲಿ ಪಾಲ್ಗೊಂಡರು. ಅಗಲಿದ ಯೋಧನ ಪರವಾಗಿ ಘೋಷಣೆಗಳನ್ನು ಕೂಗಿ, ಮರುಗಿದರು.
ಇನ್ನು, ವಿನಾಯಕ ಸರ್ಕಲ್ ನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಕುಶಾಲತೋಪು ಸಿಡಿಸಿ ಗೌರವ ಸಮರ್ಪಿಸಲಾಯಿತು. ಇದೆ ವೇಳೆ ಯೋಧ ಸಂದೀಪ್ ಅವರ ತಾಯಿ ವಿನೋದಮ್ಮ ಅವರಿಗೆ ಸೇನಾಧಿಕಾರಿಗಳು ರಾಷ್ಟ್ರಧ್ವಜ ಹಸ್ತಾಂತರಿಸಿದರು.
ಬಳಿಕ ಹಿಂದೂ ರುದ್ರಭೂಮಿಯಲ್ಲಿ ವಿಧಿವಿಧಾನಗಳ ಅನುಸಾರ ಅಂತ್ಯಕ್ರಿಯೆ ನಡೆಯಿತು. ಶಾಸಕ ಹರತಾಳು ಹಾಲಪ್ಪ, ಸಾಗರ ಉಪ ವಿಭಾಗಾಧಿಕಾರಿ ಪಲ್ಲವಿ ಸಾತೇನಳ್ಳಿ, ತಹಶೀಲ್ದಾರ್ ಡಿ.ಜಿ.ಕೋರಿ, ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ಸುತಾರ, ವೃತ್ತ ನಿರೀಕ್ಷಕ ಗಿರೀಶ್, ಪಿಎಸ್ಐ ಶಿವಾನಂದ ಕೋಳಿ, ಮಾಜಿ ಸೈನಿಕರ ಸಂಘದ ಪ್ರಮುಖರು, ಜಿಲ್ಲೆಯ ಮಾಜಿ ಯೋಧರು ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಗುಂಡು ತಗುಲಿ ರಿಪ್ಪನ್ ಪೇಟೆ ಮೂಲದ ಯೋಧ ಮಣಿಪುರದಲ್ಲಿ ನಿಧನ, ಮನೆಗೆ ಮಾಜಿ ಶಾಸಕ ಭೇಟಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422