ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | HOSANAGARA NEWS | 21 JUNE 2021
ವಿದ್ಯಾರ್ಥಿಗಳಿಗೆ ವಿತರಿಸಲು ಇರಿಸಿದ್ದ ಯುನಿಫಾರಂ ಬಟ್ಟೆಗಳು ಬೆಂಕಿಗೆ ಆಹುತಿಯಾಗಿದೆ. ಶಾಲೆಯ ಕೊಠಡಿಯಲ್ಲಿ ಈ ಸಮವಸ್ತ್ರಗಳನ್ನು ಇರಿಸಲಾಗಿತ್ತು.
ಹೊಸನಗರ ತಾಲೂಕು ಮಾರುತಿಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಘಟನೆ ಸಂಭವಿಸಿದೆ. ಇವತ್ತು ಬೆಳಗ್ಗೆ ಮುಖ್ಯೋಪಾಧ್ಯಾಯರು ಶಾಲೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಸುಮಾರು 300 ವಿದ್ಯಾರ್ಥಿಗಳಿಗೆ ವಿತರಿಸಲು ಬಟ್ಟೆಯನ್ನು ಇರಿಸಲಾಗಿತ್ತು. ಬೆಂಕಿ ಹೊತ್ತಿದ್ದರಿಂದ ಬಟ್ಟೆ ಸಂಪೂರ್ಣವಾಗಿ ಸುಟ್ಟು ಹೋಗಿದೆ ಎಂದು ಶಾಲೆಯ ಆಡಳಿತ ಮಂಡಳಿ ಆರೋಪಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಶಾಸಕ ಹರತಾಳು ಹಾಲಪ್ಪ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಲೆ ಆಡಳಿತ ಮಂಡಳಿ ಮತ್ತು ಸ್ಥಳೀಯರಿಂದ ಮಾಹಿತಿ ಪಡೆದರು.
ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ಅಜಿತ್ ಗೌಡ ಬಡೇನಕೊಪ್ಪ

LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






