ದಿಢೀರ್‌ ವಾಹನ ತಪಾಸಣೆ, ಕ್ಯಾಂಟರ್‌ನಲ್ಲಿದ್ದ ಒಬ್ಬ ಎಸ್ಕೇಪ್‌, ಮತ್ತಿಬ್ಬರು ಅರೆಸ್ಟ್‌, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 AUGUST 2023

HOSANGARA : ಅಕ್ರಮವಾಗಿ ಹೊನ್ನೆಮರದ ತುಂಡುಗಳನ್ನು ಸಾಗಿಸುತ್ತಿದ್ದವರ ಮೇಲೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ದಾಳಿ (Raid) ನಡೆಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ.

ಹೊಸನಗರ ತಾಲೂಕು ಸಂಪೆಕಟ್ಟೆ ಹೆಬ್ಬುರುಳಿ ರಸ್ತೆಯಲ್ಲಿ ಕ್ಯಾಂಟರ್‌ ಲಾರಿಯಲ್ಲಿ ಹೊನ್ನೆಮರದ ತುಂಡುಗಳನ್ನು ಸಾಗಿಸಲಾಗುತ್ತಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆಗೆ ವಾಹನ ತಡೆದಾಗ ಪ್ರಕರಣ ಬೆಳಕಿಗೆ ಬಂದಿದೆ. ಸುರೇಶ್‌ ಮತ್ತು ಗುರುಮೂರ್ತಿ ಎಂಬುವವರನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ಶಾಹಿದ್‌ ಎಂಬಾತ ಪರಾರಿಯಾಗಿದ್ದಾನೆ.

ವಲಯ ಅರಣ್ಯಾಧಿಕಾರಿ ಸಂಜಯ್‌ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಲಾಗಿತ್ತು. ಬಂಧಿತರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 9, 2023

Leave a Comment