ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ |HOSANAGARA NEWS | 19 NOVEMBER 2020
ಜಾತಿಗೊಂದು ಅಭಿವೃದ್ಧಿ ಪ್ರಾಧಿಕಾರ ರಚಿಸುತ್ತಿರುವುದು ಬಿಜೆಪಿಯ ಚುನಾವಣಾ ಗಿಮಿಕ್. ಇದು ಪರೋಕ್ಷವಾಗಿ ಮತ ಖರೀದಿಯ ವ್ಯವಹಾರವಾಗಿದೆ ಎಂದು ಮಾಜಿ ಸಚಿವ ಕಿಮ್ಮೆನೆ ರತ್ನಾಕರ್ ಆರೋಪಿಸಿದರು.
ಹೊಸನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್, ಮುಂಬರುವ ಲೋಕಸಭೆ ಮತ್ತು ಎರಡು ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿ ಇರಿಸಿಕೊಂಡು, ಅಭಿವೃದ್ಧಿ ಪ್ರಧಿಕಾರ ರಚಿಸಲಾಗಿದೆ. ಬಹು ಸಂಖ್ಯಾತ ಸಮುದಾಯಗಳಿಗೆ ತುರ್ತಾಗಿ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಗಿದೆ ಎಂದು ಆರೋಪಿಸಿದರು.
ಬಿಜೆಪಿಯವರಿಗೆ ಅಭಿವೃದ್ಧಿ ಆಧಾರದಲ್ಲಿ ಮತ ಕೇಳಲು ಸಾಧ್ಯವಾಗುತ್ತಿಲ್ಲ. ದೇಶದ ಆರ್ಥಿಕತೆ ಕಳೆದ 50 ವರ್ಷದಲ್ಲಿ ಕನಿಷ್ಠ ಮಟ್ಟಕ್ಕೆ ತಲುಪಿದೆ. ಚುನಾವಣಾ ಗಿಮಿಕ್ ಮಾಡಲು ಪ್ರಾಧಿಕಾರ ರಚಿಸಲಾಗಿದೆ. ಬೆಳಗಾವಿ ತಮ್ಮದು ಎಂದು ಹೋರಾಟ ಮಾಡುತ್ತಿರುವ ಮರಾಠ ಸಮುದಾಯಕ್ಕೆ ಮಣೆ ಹಾಕಲು ಪ್ರಾಧಿಕಾರ ರಚಿಸಲಾಗಿದೆ. ಇದು ಕನ್ನಡಿಗರಿಗೆ ಮಾಡಿದ ದ್ರೋಹವಲ್ಲವೆ ಎಂದು ಕಿಮ್ಮನೆ ರತ್ನಾಕರ್ ಪ್ರಶ್ನಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422