ಶಿವಮೊಗ್ಗ ಲೈವ್.ಕಾಂ | HOSANAGARA NEWS | 21 MAY 2021
ಪಂಚಾಯಿತಿ ಆಡಳಿತ ಮಂಡಳಿಯ ಏಕಪಕ್ಷೀಯ ನಿರ್ಧಾರದಿಂದ ಬೇಸತ್ತು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ರಾಜೀನಾಮೆಯ ನಿರ್ಧಾರ ಮಾಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರಾಮಚಂದ್ರಾಪುರ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಿಡಿಓ ಸೇರಿಕೊಂಡು ಏಕಪಕ್ಷೀಯವಾಗಿ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಇದರಿಂದ ಬೇಸತ್ತು ರಾಜೀನಾಮೆಗೆ ನಿರ್ಧರಿಸಿದ್ದೇನೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಶಾಹಬುದೀನ್ ಆದೀಲ್ ತಿಳಿಸಿದ್ದಾರೆ.
ರಾಮಚಂದ್ರಾಪುರ ಗ್ರಾಮ ಪಂಚಾಯಿತಿಯಲ್ಲಿ ಐವರು ಬಿಜೆಪಿ ಸದಸ್ಯರಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಂಬಲದಿಂದ ತಾವೊಬ್ಬರೆ ಆಯ್ಕೆಯಾಗಿದ್ದೇನೆ. ಗ್ರಾಮ ಪಂಚಾಯಿತಿ ಆಡಳಿತ ಬಿಜೆಪಿ ಬಳಿ ಇದೆ. ಹಾಗಾಗಿ ತಮ್ಮನ್ನು ಮೂಲೆಗುಂಪು ಮಾಡಿ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ತಮ್ಮ ಕ್ಷೇತ್ರ ವ್ಯಾಪ್ತಿಯ ಕೆಲಸ ಕಾರ್ಯಗಳ ಕುರಿತು ಮಾಹಿತಿ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಇದೆ ಕಾರಣಕ್ಕೆ ಗ್ರಾಮ ಸಭೆ ಕರೆದು, ಜನರ ಮುಂದೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದೇನೆ ಎಂದು ಶಾಹಬುದೀನ್ ಆದಿಲ್ ತಿಳಿಸಿದ್ದಾರೆ.
- ದೇಶದ ಅತಿ ದೊಡ್ಡ ಕೊಡುಗೆ
# Nation’s Biggest Offer Starts Midnight at shop.bigbazaar.com. Shop for ₹1500 & get ₹1000 Cashback! Be the first to shop! https://bit.ly/3v6Fu44
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]