ಶಿವಮೊಗ್ಗ ಲೈವ್.ಕಾಂ | 23 ಫೆಬ್ರವರಿ 2019
ಮಂಗನ ಕಾಯಿಲೆ ಆತಂಕ ದೂರಾಗುವ ಮೊದಲೇ, ಹೊಸನಗರದಲ್ಲಿ ಹೆಚ್1ಎನ್1 ಮಹಾಮಾರಿ ಪ್ರತ್ಯಕ್ಷವಾಗಿದೆ. ಈಗಾಗಲೇ ಇಬ್ಬರಲ್ಲಿ ಹೆಚ್1ಎನ್1 ಸೋಂಕು ಪತ್ತೆಯಾಗಿದೆ. ಸುಮಾರು 20 ಮಂದಿಗೆ ಸೋಂಕು ತಗುಲಿರುವ ಆತಂಕವಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನಗರ ಹೋಬಳಿಯಲ್ಲಿ ಸೋಂಕು ಪತ್ತೆಯಾಗಿದೆ. ಹಾಗಾಗಿ ತಾಲೂಕು ವೈದ್ಯಾಧಿಕಾರಿಗಳು ನಗರ ಹೋಬಳಿಗೆ ಭೇಟಿ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ತೆರಳಿ, ಚಿಕಿತ್ಸೆಯ ಕುರಿತು ಪರಿಶೀಲನೆ ನಡೆಸಿದ್ದಾರೆ.
‘ಹೆಚ್1ಎನ್1 ಭಯ ಬೇಡ’
ಹಂದಿ ಜ್ವರದ ಹಿನ್ನೆಲೆ, ತಾಲೂಕು ವೈದ್ಯಾಧಿಕಾರಿ ಡಾ.ಸುರೇಶ್ ನೇತೃತ್ವದಲ್ಲಿ, ಮೂಡುಗೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಸಭೆ ನಡೆಸಲಾಗುತ್ತಿದೆ. ನಗರ ಹೋಬಳಿಯ ಐದು ಗ್ರಾಮ ಪಂಚಾಯಿತಿ ಸದಸ್ಯರು, ಪಿಡಿಓಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಹಂದಿ ಜ್ವರ ನಿಯಂತ್ರಣದ ಕುರಿತು ಚರ್ಚಿಸಲಾಗಿದೆ. ಇನ್ನು, ಹೆಚ್1ಎನ್1 ಕುರಿತು ಜನ ಆತಂಕ ಪಡುವ ಅಗತ್ಯವಿಲ್ಲ. ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]