ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಿಪ್ಪನ್‌ಪೇಟೆ: ಬೈಕುಗಳು ಮುಖಾಮುಖಿ ಡಿಕ್ಕಿಯಾಗಿ ಸರ್ಕಾರಿ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ (Head Master) ಸಾವನ್ನಪ್ಪಿದ್ದಾರೆ. ರಿಪ್ಪನ್‌ಪೇಟೆಯ ಶಿವಮಂದಿರ ಸಮೀಪ ಘಟನೆ ಸಂಭವಿಸಿದೆ.
ಕೋಟೆತಾರಿಗ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಅರಸಾಳು ನಿವಾಸಿ ಮಂಜಯ್ಯ (59) ಮೃತರು. ಶಾಲೆ ಮುಗಿಸಿ ಮಂಜಯ್ಯ ಅವರು ತಮ್ಮ ಬೈಕಿನಲ್ಲಿ ಮನೆಗೆ ತೆರಳುವಾಗ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಮಂಜಯ್ಯ ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು. ಆ ವೇಳೆಗಾಗಲೆ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಮತ್ತೊಂದು ಬೈಕಿನ ಸವಾರನಿಗು ಗಾಯವಾಗಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ » ನಿಲ್ದಾಣದಲ್ಲಿಯೇ ಸಿಟಿ ಬಸ್ ಕಂಡಕ್ಟರ್‌ಗಳ ಮಧ್ಯೆ ಕಿರಿಕ್, ಕೈ ಕೈ ಮಿಲಾಯಿಸಿದ ನಿರ್ವಾಹಕರು

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು















