ವಿದೇಶದಿಂದ ಮರಳಿದ್ದ ಯುವಕನಿಗೆ ಹೃದಯಾಘಾತ, ಸಾವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ರಿಪ್ಪನ್‌ಪೇಟೆ: ವಿದೇಶದಿಂದ ಮರಳಿದ್ದ ಯುವಕನೊಬ್ಬ ಹೃದಯಾಘಾತಕ್ಕೀಡಾಗಿ (Heart Attack) ಸಾವನ್ನಪ್ಪಿದ್ದಾರೆ. ಹೊಸನಗರ ತಾಲೂಕು ರಿಪ್ಪನ್‌ಪೇಟೆಯ ಇಮ್ರಾನ್‌ (36) ಮೃತ ದುರ್ದೈವಿ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕಳೆದ ಮೂರು ವರ್ಷದಿಂದ ಇಮ್ರಾನ್ ಸೌದಿ ಆರೇಬಿಯಾದಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದರು. ಎರಡು ದಿನದ ಹಿಂದೆ ರಿಪ್ಪನ್‌ಪೇಟೆಯ ಮದೀನಾ ಕಾಲೋನಿಯ ಮನೆಗೆ ಬಂದಿದ್ದರು. ಇವತ್ತು ಬೆಳಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೆ ಇಮ್ರಾನ್‌ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

Youth-Returned-from-saudi-arabia-scummbed-at-ripponpete Heart Attack

ಶಿವಮೊಗ್ಗದ ಮಾರ್ಗ ಮಧ್ಯೆ ಇಮ್ರಾನ್‌ ಕೊನೆಯುಸಿರೆಳೆದಿದ್ದಾರೆ. ಇಮ್ರಾನ್‌ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಇದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಲರ್ಟ್‌, ರೈಲುಗಳಲ್ಲಿ ಶೋಧ, ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ

Heart Attack

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment