ಶಿವಮೊಗ್ಗ ಜಿಲ್ಲೆಯ 3 ತಾಲ್ಲೂಕುಗಳಿಗೆ ಜುಲೈ 7ರಂದು ರಜೆ, ಎಲ್ಲೆಲ್ಲಿ?

ಮಳೆ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಚುರುಕಾಗಿದ್ದು ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮೂರು ತಾಲೂಕುಗಳಲ್ಲಿ ಜುಲೈ 7ರಂದು ರಜೆ ಘೋಷಣೆ ಮಾಡಿ ಆಯಾ ತಹಾಶೀಲ್ದಾರ್‌ಗಳು ಆದೇಶ ಹೊರಡಿಸಿದ್ದಾರೆ.

ಎಲ್ಲೆಲ್ಲಿ ರಜೆ ಘೋಷಣೆ?

ತೀರ್ಥಹಳ್ಳಿ: ಅಂಗನವಾಡಿ, ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಂಜಿತ್ ಆದೇಶ ಹೊರಡಿಸಿದ್ದಾರೆ.

himoga-DC-office-and-Police-jeep-in-front-of-office

ಹೊಸನಗರ: ಅಂಗನವಾಡಿ, ಶಾಲೆಗಳು ಮತ್ತು ಪಿ.ಯು ಕಾಲೇಜುಗಳಿಗೆ ತಹಶೀಲ್ದಾರ್ ಭರತ್ ರಾಜ್ ರಜೆ ಘೋಷಿಸಿದ್ದಾರೆ.

ಸಾಗರ: ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಡಾ.ಪ್ರತಿಭಾ ಆದೇಶಿಸಿದ್ದಾರೆ.