ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | HOSANAGARA | 8 ಫೆಬ್ರವರಿ 2020
ಹೊಸನಗರದ ಮುಡುಬಾ ಸೇತುವೆ ಕ್ರಾಸ್ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ಸೇತುವೆ ಕೆಳಗೆ ಪಲ್ಟಿ ಹೊಡೆದಿದೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬರಿಗೆ ಗಂಭೀರ ಗಾಯವಾಗಿದೆ.
ಕಾರು ಹೊನ್ನಾವರದಿಂದ ಸಾಗರ, ಹೊಸನಗರ ಮಾರ್ಗವಾಗಿ ನಗರದ ದರ್ಗಾಕ್ಕೆ ತೆರಳುತ್ತಿತ್ತು. ಖಾಸಗಿ ಬಸ್ ಕುಂದಾಪುರ ಹೊಸನಗರ ಮಾರ್ಗವಾಗಿ ಸಾಗರಕ್ಕೆ ಹೋಗುತ್ತಿತ್ತು. ಈ ವೇಳೆ ಮುಡುಬಾ ಸೇತುವೆ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸೇತುವೆಯ ಕಳೆಗೆ ಪಲ್ಟಿ ಹೊಡೆದಿದ್ದು, ನುಜ್ಜುಗುಜ್ಜಾಗಿದೆ.
ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದರು. ಈ ಪೈಕಿ ಒಬ್ಬರ ಕೈ ಮತ್ತು ಕಾಲಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





