ಶಿವಮೊಗ್ಗ ಲೈವ್.ಕಾಂ | 9 ಮಾರ್ಚ್ 2019
ಹೊಸನಗರ ತಾಲೂಕಿನ ಹಲುಸಾಲೆ ಮಳವಳ್ಳಿ ಗ್ರಾಮದ ಬಳಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಅಂದಾಜು 2.56 ಲಕ್ಷ ವೌಲ್ಯದ ಮರಳನ್ನು ವಶಕ್ಕೆ ಪಡೆಯಲಾಗಿದೆ.
ಹಲುಸಾಲೆ ಮಳವಳ್ಳಿ ಗ್ರಾಮದ ದಿನೇಶ್‌ಗೌಡ ಎಂಬುವವರು ಅಕ್ರಮವಾಗಿ ದಾಸ್ತಾನು ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗ್ರಾಮದ ಶರಾವತಿ ಹಿನ್ನೀರಿಗೆ ಸೇರಿದ ನೀರಿಲ್ಲದ ಹಳ್ಳದಲ್ಲಿ ಅಕ್ರಮವಾಗಿ ಮರಳನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಸಿಇಎನ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್, ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
80 ಲೋಡ್ ಟ್ರಕ್ (136.5 ಕ್ಯೂಬಿಕ್ ಮೀಟರ್ ಪ್ರಮಾಣ) ಮರಳನ್ನು ದಾಸ್ತಾನು ಮಾಡಲಾಗಿತ್ತು. ದಿನೇಶ್‌ಗೌಡ ತಲೆಮರಿಸಿಕೊಂಡಿದ್ದು, ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]