ಶಿವಮೊಗ್ಗ ಲೈವ್
ಶಿವಮೊಗ್ಗ ಲೈವ್.ಕಾಂ | ಹೊಸನಗರ
ಹೊಸನಗರ ಪಟ್ಟಣಕ್ಕೆ ನೂತನ ವಿದ್ಯುತ್ ಫೀಡರ್ ರಚನೆ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆ ಆಗಸ್ಟ್ 16 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹಿನ್ನೆಲೆ ಜೇನಿ, ಕೋಡೂರು, ಮಾರುತಿಪುರ ಗ್ರಾಮ ಪಂಚಾಯಿತಿ ಹಾಗೂ ಹೊಸನಗರ ಪಟ್ಟಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.