ಹೊಸನಗರದಲ್ಲಿ ಉಕ್ಕಡ ಮಗುಚಿ ಯುವಕ ನಾಪತ್ತೆ, ಸರ್ಕಾರದ ವಿರುದ್ಧ ಸ್ಥಳೀಯರು ಗರಂ, ಹೇಗಾಯ್ತು ಘಟನೆ?

ಹೊಸನಗರ: ಹೊಳೆ ದಾಟುವಾಗ ಉಕ್ಕಡ ಮಗುಚಿ ಯುವಕ ನೀರುಪಾಲಾಗಿದ್ದಾನೆ (Tragedy). ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಹೊಸನಗರ ತಾಲೂಕು ಬಂಟೋಡಿಯಲ್ಲಿ ಇಂದು ಮಧ್ಯಾಹ್ನ ಘಟನೆ ನಡೆದಿದೆ.

ತಾಲೂಕಿನ ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಟ್ಟಿನಹೊಳೆ ಗ್ರಾಮದ ಮೂವರು ಯುವಕರು ತೆರಳುತ್ತಿದ್ದ ಉಕ್ಕಡ ಮಗುಚಿದೆ. ಪೂರ್ಣೇಶ (22) ಎಂಬ ಯುವಕ ನೀರು ಪಾಲಾಗಿದ್ದಾರೆ. ಜೊತೆಯಲ್ಲಿದ್ದ ಶರತ್ ಮತ್ತು ರಂಜನ್ ಎಂಬ ಯುವಕರು ಅದೃಷ್ಟವಶಾತ್ ಬದುಕುಳಿದಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ದೌಡಾಯಿಸಿದ್ದು, ನೀರುಪಾಲಾದ ಯುವಕನ ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.

ಸರ್ಕಾರದ ವಿರುದ್ಧ ಗ್ರಾಮಸ್ಥರ ಆಕ್ರೋಶ

Hosanagara-Sampekatte-Ukkada-incident

ಚಿಂಚನೂರು ಮತ್ತು ಬಂಟೋಡಿ ನಡುವೆ ಕಾಲುಸಂಕ ನಿರ್ಮಿಸುವಂತೆ ಹಲವು ವರ್ಷಗಳಿಂದ ಗ್ರಾಮಸ್ಥರು ಬೇಡಿಕೆ ಇಟ್ಟಿದ್ದರು. ಪ್ರತಿ ಬಾರಿ ಮುಳುಗಡೆ ಸಂದರ್ಭದಲ್ಲಿ ಉಕ್ಕಡದ ಮೂಲಕವೇ ಸಾಗಬೇಕಾದ ಪರಿಸ್ಥಿತಿ ಇದೆ. ದಶಕಗಳ ಬೇಡಿಕೆಗೆ ಸರ್ಕಾರ ಸ್ಪಂದಿಸದೆ ಇರುವುದರಿಂದ ಈ ದುರಂತ ಸಂಭವಿಸಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

JNNCE-Admission-Advt-scaled

ಇದನ್ನೂ ಓದಿ » ಹೊಟ್ಟೆನೋವು ಅಂತಾ ಆಸ್ಪತ್ರೆಗೆ ಬಂದ ಮಹಿಳೆ, ಪರಿಶೀಲಿಸಿದಾಗ ಕಾದಿತ್ತು ಆಘಾತ

Hosanagra ukkada Tragedy

Hosanagara-Sampekatte-Ukkada-incident

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment