ಶಿವಮೊಗ್ಗ ಲೈವ್.ಕಾಂ | HOSANAGARA NEWS | 16 JUNE 2021
ಹುಲಿಕಲ್ – ಬಾಳೆಬರೆ ರಸ್ತೆ ಅಭಿವೃದ್ಧಿ ಕಾರ್ಯ ಪೂರ್ಣಗೊಂಡ ಹಿನ್ನೆಲೆ ಶಾಸಕ ಆರಗ ಜ್ಞಾನೇಂದ್ರ ಹುಲಿಕಲ್ ಘಾಟಿಯ ಚಂಡಿಕೇಶ್ವರಿ ದೇಗುಲ ಆವರಣದಲ್ಲಿ ಸಂಚಾರಕ್ಕೆ ಮುಕ್ತಗೊಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನಾಲ್ಕು ಕೋಟಿ ರೂ. ವೆಚ್ಚ
ಉದ್ಘಾಟನೆ ಬಳಿಕ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ಹುಲಿಕಲ್ ಘಾಟಿಯನ್ನು ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಇನ್ನೂ ಎರಡು ಕೋಟಿ ರೂ. ವೆಚ್ಚದಲ್ಲಿ ಸಾಯಿಲ್ ನೈಲಿಂಗ್ ಕಾಮಗಾರಿ ನಡೆಯಲಿದೆ. ಘಾಟಿ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದರು.
ಬಾಳೆಬರೆ ಘಾಟಿ ಅಭಿವೃದ್ಧಿಗಾಗಿ ಜೂನ್ 5ರವರೆಗೆ ಈ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಆದರೆ ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಯದ ಹಿನ್ನೆಲೆ ಜೂನ್ 15ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿತ್ತು. ಈಗ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆಯಾಗಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೀಣಾ ಪುರುಷೋತ್ತಮ, ಸದಸ್ಯರಾದ ಕೆ.ಬಿ.ಕೃಷ್ಣಮೂರ್ತಿ, ಪ್ರಕಾಶ್, ಇಸ್ಮಾಯಿಲ್, ಪಿಡಬ್ಲುಡಿ ಎಇಇ ರಾಮಚಂದ್ರ, ನಿವೃತ್ತ ಎಇಇ ಶೇಷಪ್ಪ, ಪ್ರಮುಖರಾದ ಬಂಕ್ರಿಬೀಡು ಮಂಜುನಾಥ, ರವೀಂದ್ರ ಪ್ರಭು, ಅನಂತ ಕುಮಾರ ಶೆಣೈ, ಶ್ರೀಧರ್ ಸುಳುಗೋಡು, ದೇವಸ್ಥಾನದ ಧರ್ಮದರ್ಶಿ ಮೋಹನ್ ನಂಬಿಯಾರ್ ಸೇರಿದಂತ ಹಲವರು ಇದ್ದರು.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]