ಹೊಸನಗರ, ನಗರ ಪೊಲೀಸ್‌ ಠಾಣೆಗಳಿಗೆ ಐಜಿಪಿ ಭೇಟಿ, ಪರಿಶೀಲನೆ, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಹೊಸನಗರ: ದಾವಣಗೆರೆ ಪೂರ್ವ ವಲಯದ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಅವರು ಹೊಸನಗರ ಹಾಗೂ ನಗರ ಪೊಲೀಸ್ ಠಾಣೆಗಳಲ್ಲಿ ವಾರ್ಷಿಕ ಪರಿವೀಕ್ಷಣೆ ನಡೆಸಿದರು. ಆಯಾ ಠಾಣೆಗಳಿಗೆ ಭೇಟಿ ನೀಡಿದ ಐಜಿಪಿ ಅವರಿಗೆ ಪೊಲೀಸರು ಗೌರವ ವಂದನೆ ಸಲ್ಲಿಸಿದರು.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಠಾಣೆಗಳ ದೈನಂದಿನ ಕಾರ್ಯವೈಖರಿ, ಅಪರಾಧ ಪ್ರಕರಣಗಳ ದಾಖಲಾತಿ, ಕಡತಗಳ ನಿರ್ವಹಣೆ ಹಾಗೂ ಇಲಾಖೆಯ ಇತರೆ ಪ್ರಮುಖ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ರವಿಕಾಂತೇಗೌಡ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸಬೇಕು ಎಂದು ಸೂಚಿಸಿದರು.

IGP-Ravikanthegowda-visit-Nagara-Police-station-in-Hosanagara-taluk

ಇದೇ ಸಂದರ್ಭ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕುಂದುಕೊರತೆ ಆಲಿಸಿದ ಐಜಿಪಿ ರವಿಕಾಂತೇಗೌಡ ಅವರು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುವಂತೆ ಸಿಬ್ಬಂದಿಗೆ ಅಗತ್ಯ ಸಲಹೆ ಹಾಗೂ ಮಾರ್ಗಸೂಚಿಗಳನ್ನು ನೀಡಿದರು. ಸಾರ್ವಜನಿಕ ಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವುದು ಮತ್ತು ಕಡತಗಳ ಶೀಘ್ರ ವಿಲೇವಾರಿಗೆ ಆದ್ಯತೆ ನೀಡಬೇಕು ಎಂದು ಅವರು ಸೂಚನೆ ನೀಡಿದರು. ಈ ಪರಿವೀಕ್ಷಣೆ ಸಂದರ್ಭ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್‌ ಇದ್ದರು.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!